Breaking News

ಹೋಳಿ ಹಬ್ಬಕ್ಕೆ ಉತ್ತರ ಕರ್ನಾಟಕದ ಜನರಿಗೆ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ

ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು (SWR) ಬೆಂಗಳೂರಿನಿಂದ ಬೀದರ್ ಮತ್ತು ಕಲಬುರಗಿಗೆ ಸಂಚರಿಸುವ ವಿಶೇಷ ರೈಲುಗಳ ಅವಧಿಯನ್ನು ಮಾರ್ಚ್ ಅಂತ್ಯದವರೆಗೆ ವಿಸ್ತರಿಸಿದೆ. ರೈಲು ಸಂಖ್ಯೆ 06539 (ಬೆಂಗಳೂರು – ಬೀದರ್) ಇದು ಪ್ರತಿ ಶುಕ್ರವಾರ ಮತ್ತು ಭಾನುವಾರ ಸಂಚರಿಸಲಿದ್ದು, ಈ ಹಿಂದೆ ಫೆಬ್ರವರಿ 27ಕ್ಕೆ ಕೊನೆಗೊಳ್ಳಬೇಕಿತ್ತು. ಈಗ ಇದನ್ನು ಮಾರ್ಚ್ 29, 2026 ರವರೆಗೆ ವಿಸ್ತರಿಸಲಾಗಿದೆ.

ರೈಲು ಸಂಖ್ಯೆ 06540 (ಬೀದರ್ – ಬೆಂಗಳೂರು) ಪ್ರತಿ ಶನಿವಾರ ಮತ್ತು ಸೋಮವಾರ ಸಂಚರಿಸಲಿದ್ದು, ಇದರ ಅವಧಿಯನ್ನು ಮಾರ್ಚ್ 30, 2026 ರವರೆಗೆ ವಿಸ್ತರಿಸಲಾಗಿದೆ. ಬೆಂಗಳೂರು – ಕಲಬುರಗಿ ಸಾಪ್ತಾಹಿಕ ವಿಶೇಷ ರೈಲು ಬೆಂಗಳೂರು ಕಂಟೋನ್ಮೆಂಟ್ (Bengaluru Cantt) ಮತ್ತು ಕಲಬುರಗಿ ನಡುವೆ ಸಂಚರಿಸುತ್ತದೆ ರೈಲು ಸಂಖ್ಯೆ 06207 (ಬೆಂಗಳೂರು – ಕಲಬುರಗಿ) ಪ್ರತಿ ಶನಿವಾರ ಸಂಚರಿಸಲಿದ್ದು, ಇದರ ಅವಧಿಯನ್ನು ಮಾರ್ಚ್ 28, 2026 ರವರೆಗೆ ವಿಸ್ತರಿಸಲಾಗಿದೆ. ರೈಲು ಸಂಖ್ಯೆ 06208 (ಕಲಬುರಗಿ – ಬೆಂಗಳೂರು) ಪ್ರತಿ ಭಾನುವಾರ ಸಂಚರಿಸಲಿದ್ದು, ಇದರ ಅವಧಿಯನ್ನು ಮಾರ್ಚ್ 29, 2026 ರವರೆಗೆ ವಿಸ್ತರಿಸಲಾಗಿದೆ.

Advertisement

ಇದನ್ನೂ ಓದಿ: ರಾಜ್ಯಾದ್ಯಂತ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

ಈ ರೈಲುಗಳ ನಿಲುಗಡೆಗಳು (Stoppages) ಮತ್ತು ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.ಐಆರ್‌ಸಿಟಿಸಿ (IRCTC) ವೆಬ್‌ಸೈಟ್ ಅಥವಾ ರೈಲ್ವೆ ಕೌಂಟರ್‌ಗಳ ಮೂಲಕ ಈಗಲೇ ಟಿಕೆಟ್ ಕಾಯ್ದಿರಿಸಬಹುದು. ಈ ರೈಲುಗಳಿಗೆ ವಿಶೇಷ ದರ ಅನ್ವಯವಾಗಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು