ಬೆಳ್ತಂಗಡಿ: ರಸ್ತೆಯಲ್ಲೇ ಉರುಳಿ ಬಿದ್ದ ಓಮ್ನಿ ಕಾರು; ಪಾದಚಾರಿಗಳ ಮೇಲೆ ಹರಿದು ಭೀಕರ ಅಪಘಾತ!

ಬೆಳ್ತಂಗಡಿ: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರು ಪವಾಡಸದೃಶವಾಗಿ ಪಾರಾಗಿದ್ದಾರೆ.

ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಬೊಲೆರೋ ಜೀಪ್‌ನಿಂದ ಇಳಿದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಮಾರುತಿ ಓಮ್ನಿ ಕಾರು, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ಪಲ್ಟಿಯಾಗಿದೆ. ಉರುಳುತ್ತಾ ಬಂದ ಕಾರು ನೇರವಾಗಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಗುಂಪಿಗೆ ಅಪ್ಪಳಿಸಿದೆ.

ಇದನ್ನೂ ಓದಿ: ವಿಟ್ಲ: ಹುಟ್ಟೂರಿನಲ್ಲಿ ನೆರವೇರಿದ ಅನಿಕೇತ್ ಅಂತ್ಯಕ್ರಿಯೆ

ಅಪಘಾತದ ತೀವ್ರತೆಗೆ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ದುರದೃಷ್ಟವಶಾತ್ ಮತ್ತೋರ್ವ ಮಹಿಳೆ ಪಲ್ಟಿಯಾದ ಕಾರಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಧಾವಿಸಿ ಮಹಿಳೆಯನ್ನು ರಕ್ಷಿಸಿ ಆಟೋರಿಕ್ಷಾ ಮೂಲಕ ಬೆಳ್ತಂಗಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಭೀಕರ ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುವವರ ಎದೆ ನಡುಗಿಸುವಂತಿದೆ. ಅತೀ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ರಾಜ್ಯದ ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು