Breaking News

Breaking: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಇಂದು (ಫೆಬ್ರವರಿ 13, 2026) ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ, ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿದ್ದ XUV 700 ಕಾರು (KA-03 NW-0138) ಅಪಘಾತಕ್ಕೀಡಾಗಿದೆ.

ಈ ಕಾರಿನಲ್ಲಿದ್ದ 6 ಜನ ಹಾಗೂ ಓರ್ವ ಬೈಕ್ ಸವಾರ ಸೇರಿ ಒಟ್ಟು 7 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಆರು ಜನ ಕಾರಿನಲ್ಲಿದ್ದ ಪ್ರಯಾಣಿಕರು ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಮೃತರ ಹೆಸರು ಮತ್ತು ವಿಳಾಸದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.

Advertisement

ಇದನ್ನೂ ಓದಿ: 1 ಸಾವಿರ ರೂ.ಗೆ ಪತ್ನಿಯನ್ನೇ ಮಾರಿದ ಪತಿ! ಬಳಿಕ ನಡೆದಿದ್ದೇ ಅಮಾನವೀಯ ಕೃತ್ಯ

ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು