WPL: ಟ್ರೋಫಿ ಗೆದ್ದ ಮಹಿಳೆಯರಿಗೆ ಸಿಕ್ಕ ಮೊತ್ತ ಎಷ್ಟು?

ವಡೋದರ: ನಿನ್ನೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 203 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಆರ್‌ಸಿಬಿ 19.4 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 204 ರನ್ ಗಳಿಸಿ ಜಯಗಳಿಸಿತು.

ಇದನ್ನೂ ಓದಿPariksha Pe Charcha 2026: ವಿದ್ಯಾರ್ಥಿಗಳಿಗೆ ಮಹತ್ವದ ಸಲಹೆ ನೀಡಿದ ಪ್ರಧಾನಿ ಮೋದಿ

Advertisement

ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಭಾರಿ ಮೊತ್ತದ ಬಹುಮಾನವೂ ಸಿಕ್ಕಿದೆ. ಫೈನಲ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಕೋಟಿ ರೂ. ಬಹುಮಾನ ಸಿಕ್ಕಿದೆ. ಹಾಗೆಯೇ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 3 ಕೋಟಿ ರೂ. ಬಹುಮಾನ ಸಿಕ್ಕಿದೆ. ಡಬ್ಲ್ಯುಪಿಎಲ್ ಮೊದಲ ಆವೃತ್ತಿಯಿಂದಲೂ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಕ್ಕೆ ಇಷ್ಟೇ ಮೊತ್ತದ ಬಹುಮಾನವನ್ನು ನೀಡಲಾಗುತ್ತಿದೆ.

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು