ಕೊಲೊಂಬೊ: ವಿಶ್ವ ಕ್ರಿಕೆಟ್‌ನಲ್ಲಿ ಭಾರತ ಪಾಕಿಸ್ತಾನ ಸಾಂಪ್ರದಾಯಿಕ ಎದುರಾಳಿ. ಇವರಿಬ್ಬರ ನಡುವಿನ ಹೈವೋಲ್ಟೇಜ್ ಪಂದ್ಯ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ಬಾರಿಯ ಟಿ- 20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿ ಆಗೋದು ಅನುಮಾನ.
ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ.

ಇದನ್ನೂ ಓದಿ: ದೆಹಲಿಯ ಒಂಬತ್ತು ಶಾಲೆಗಳಿಗೆ “ದೆಹಲಿಯು ಖಲಿಸ್ತಾನವಾಗಲಿದೆ”: ಸಂದೇಶದೊಂದಿಗೆ ಬಾಂಬ್ ಬೆದರಿಕೆ
ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
1. ಐಸಿಸಿಯಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯವನ್ನು ಹೆಚ್ಚಿಸಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ. ಈ ಬೇಡಿಕೆಗೆ ಸಮ್ಮತಿಸುವುದಾದರೆ ಮಾತ್ರ ಭಾರತದ ವಿರುದ್ಧ ಕಣಕ್ಕಿಳಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.
2. ಭಾರತ ಮತ್ತು ಪಾಕಿಸ್ತಾನ್ ನಡುವಣ ದ್ವಿಪಕ್ಷೀಯ ಸರಣಿಯನ್ನು ಮತ್ತೆ ಆರಂಭಿಸಬೇಕೆಂದು ಪಿಸಿಬಿ ಆಗ್ರಹಿಸಿದೆ. ಇದಕ್ಕಾಗಿ ಐಸಿಸಿ ಮುಖ್ಯ ಪಾತ್ರವಹಿಸಬೇಕು. ಈ ಮೂಲಕ ಭಾರತ ಮತ್ತು ಪಾಕಿಸ್ತಾನ್ ನಡುವಣ ಸರಣಿಯನ್ನು ಪುನಃಸ್ಥಾಪಿಸುವ ಭರವಸೆ ನೀಡಬೇಕೆಂದು ಪಿಸಿಬಿ ಆಗ್ರಹಿಸಿದೆ.
3. ಕ್ರೀಡಾ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು. ಪಂದ್ಯಗಳ ವೇಳೆ ಹ್ಯಾಂಡ್ಶೇಕ್ ಪ್ರೋಟೋಕಾಲ್ ಜಾರಿ ಮಾಡಬೇಕು. ಈ ಪ್ರೊಟೋಕಾಲ್ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಹ್ಯಾಂಡ್ಶೇಕ್ ಮಾಡುವುದನ್ನು ಕಡ್ಡಾಯ ಮಾಡಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ.
ಸದ್ಯ ಈ ಮೂರು ಬೇಡಿಕೆಗಳೊಂದಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಅಧಿಕಾರಿಗಳ ನಡುವೆ ಚರ್ಚೆ ಮುಂದುವರೆದಿದೆ. ಅಲ್ಲದೆ ಇಂದು (ಫೆ.9) ಐಸಿಸಿ-ಪಿಸಿಬಿ ಅಧಿಕಾರಿಗಳ ನಡುವೆ ಲಾಹೋರ್ನಲ್ಲಿ ಈ ಕುರಿತಾದ ವಿಶೇಷ ಸಭೆ ನಡೆಯಲಿದ್ದು, ಈ ವೇಳೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

