ಹಾಕಿ: ಮಲೇಷ್ಯಾ ವಿರುದ್ಧ 5-1 ಭರ್ಜರಿ ಗೆಲುವು: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಚಿನ್ನ

ಏಷ್ಯನ್ ಗೇಮ್ಸ್‌ನ 15ನೇ ದಿನ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಒಲಿದಿದ್ದು, ಪುರುಷರ ಹಾಕಿ ತಂಡ ಮಲೇಷ್ಯಾವನ್ನು 5-1 ಗೋಲುಗಳಿಂದ ಮಣಿಸಿ ಸ್ವರ್ಣ ಪದಕ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಭಾರತ ಏಷ್ಯನ್ ಗೇಮ್ಸ್‌ನಲ್ಲಿ 21ನೇ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ.

ಫೈನಲ್ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ 11ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಭಾರತಕ್ಕೆ ಮುನ್ನಡೆ ನೀಡಿದರು. ಬಳಿಕ ಮಲೇಷ್ಯಾ ಸಮಬಲ ಸಾಧಿಸಿದರೂ, ಜುಗ್ರಾಜ್ ಸಿಂಗ್ ಗೋಲಿನಿಂದ ಭಾರತ ಮತ್ತೆ ಮುನ್ನಡೆ ಪಡೆಯಿತು.

ಇದನ್ನೂ ಓದಿ: IND vs Pak ಫೈನಲ್: ಪಾಕಿಸ್ತಾನ ಸೋಲಿಸಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದ ಭಾರತ

ದ್ವಿತೀಯಾರ್ಧದಲ್ಲಿ ಭಾರತದ ಆಕ್ರಮಣಕಾರಿ ಆಟ ಮುಂದುವರಿಯಿತು. ಹಾರ್ದಿಕ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಗೋಲು ಗಳಿಸಿದರೆ, ಶಿಲಾನಂದ್ ಲಾಕ್ರಾ ಹಾಗೂ ಹರ್ಮನ್‌ಪ್ರೀತ್ ಸಿಂಗ್ ತಲಾ ಒಂದು ಗೋಲು ದಾಖಲಿಸಿದರು. ಅಂತಿಮವಾಗಿ 5-1 ಅಂತರದಲ್ಲಿ ಜಯ ಸಾಧಿಸಿದ ಭಾರತ ಚಿನ್ನಕ್ಕೆ ಮುತ್ತಿಕ್ಕಿತು.

ಈ ಗೆಲುವಿನೊಂದಿಗೆ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಚಿನ್ನ ಗೆದ್ದು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆದಿವೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *