ನಾಗ್ಪುರ: ಇಲ್ಲಿನ ವಿಸಿಎ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ, 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 238 ರನ್ ಬಾರಿಸಿತು. ತಂಡದ ಪರ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದು, 35 ಎಸೆತಗಳಲ್ಲಿ 5 ಬೌಂಡರಿ ಹಾಗೂ 8 ಸಿಕ್ಸರ್ಗಳನ್ನು ಸಿಡಿಸಿ ಒಟ್ಟು 84 ರನ್ ಬಾರಿಸಿದರು. ಇನಿಂಗ್ಸ್ ಕೊನೆಯಲ್ಲಿ ರಿಂಕು ಸಿಂಗ್ 20 ಎಸೆತಗಳಲ್ಲಿ 3 ಸಿಕ್ಸ್, 4 ಬೌಂಡರಿ ನೆರವಿನಿಂದ ಅಜೇಯ 44 ರನ್ ಕಲೆಹಾಕಿದರು.

ಇನ್ನುಳಿದಂತೆ, ಹಾರ್ದಿಕ್ ಪಾಂಡ್ಯ 25, ಸೂರ್ಯಕುಮಾರ್ ಯಾದವ್ 35, ಸಂಜು ಸ್ಯಾಮ್ಸನ್ 10, ಇಶಾನ್ ಕಿಶನ್ 8, ಶಿವಂ ದುಬೆ 9, ಅಕ್ಷರ್ ಪಟೇಲ್ 5 ರನ್ಗಳನ್ನು ಗಳಿಸಿದರು.
239 ರನ್ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್, 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 190 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಟೀಮ್ ಇಂಡಿಯಾ 48 ರನ್ ಅಂತರದಿಂದ ಗೆಲುವು ಸಾಧಿಸಿತು.
ಇದನ್ನೂ ಓದಿ: Political: ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ

ನ್ಯೂಜಿಲ್ಯಾಂಡ್ ತಂಡದ ಪರ ಗ್ಲೆನ್ ಫಿಲಿಪ್ಸ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್ಗಳನ್ನು ಸಿಡಿಸಿ 78 ರನ್ ಬಾರಿಸಿದರು. ಇನ್ನುಳಿದಂತೆ, ಟಿಮ್ ರಾಬಿನ್ಸನ್ 21, ರಾಚಿನ್ ರವೀಂದ್ರ 1, ಮಾರ್ಕ್ ಚಾಪ್ಮನ್ 39, ಡ್ಯಾರಿಲ್ ಮಿಚೆಲ್ 28, ಮಿಚೆಲ್ ಸ್ಯಾಂಟ್ನರ್ 20, ಕೈಲ್ ಜೇಮಿಸನ್ 1* ರನ್ ಗಳಿಸಿದರು. ಕ್ರಿಸ್ ಕ್ಲಾರ್ಕ್ ಮತ್ತು ಡೆವೊನ್ ಕಾನ್ವೇ ಶೂನ್ಯ ಸುತ್ತಿದರು.
ಭಾರತದ ಪರ ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ 2, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಅರ್ಪದೀಪ್ ಸಿಂಗ್ ತಲಾ 1 ವಿಕೆಟ್ ಪಡೆದರು. ನ್ಯೂಜಿಲ್ಯಾಂಡ್ ಪರ ಕೈಲ್ ಜೇಮಿಸನ್, ಜಾಕೋಬ್ ಡಫಿ ತಲಾ 2, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಕ್ರಿಸ್ ಕ್ಲಾರ್ಕ್ ತಲಾ 1 ವಿಕೆಟ್ ಪಡೆದರು.
ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿತು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

