ನವದೆಹಲಿ: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಸೋಮವಾರದಿಂದ ಆರಂಭವಾಗಿರುವ ಎಐ ಇಂಪ್ಯಾಕ್ಟ್ ಸಮಿಟ್ ಆರಂಭಗೊಂಡಿದ್ದು ಜಗತ್ತಿನ ಮೂಲೆಮೂಲೆಯ ಜನರ ಜೀವನವನ್ನು ಎಐ ಹೇಗೆ ಸುಧಾರಿಸಬಹುದು ಎಂಬ ಬಗ್ಗೆ ಚರ್ಚೆಗಳು ನಡೆದಿವೆ.
ಇದನ್ನೂ ಓದಿ: T20 Worldcup: ನೆಮಿಬೀಯಾ ವಿರುದ್ಧ ಭರ್ಜರಿ ಜಯ ಸಾಧಿಸಿ ಸೂಪರ್-8ಗೆ ಲಗ್ಗೆ ಇಟ್ಟ ಪಾಕಿಸ್ತಾನ

ಇದರ ನಡುವೆ ಭಾರತ ಒಂದು ಹೊಸ ಮೈಲಿಗಲ್ಲು ತಲುಪಿದೆ.
ಇಂಡಿಯಾ-AI ಮಿಷನ್ ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು, ಇಂಟೆಲ್ ಇಂಡಿಯಾ ಸಹಯೋಗದೊಂದಿಗೆ “24 ಗಂಟೆಗಳಲ್ಲಿ ಎಐ ಜವಾಬ್ದಾರಿಯ ಅಭಿಯಾನಕ್ಕಾಗಿ ಸ್ವೀಕರಿಸಿದ ಅತಿ ಹೆಚ್ಚು ಪ್ರತಿಜ್ಞೆಗಳು” ಎಂಬ ಶೀರ್ಷಿಕೆಯಡಿ ಅಧಿಕೃತವಾಗಿ ಗಿನ್ನೆಸ್ ವಿಶ್ವ ದಾಖಲೆ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಗಿನ್ನೆಸ್ ವಿಶ್ವ ದಾಖಲೆ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಈ ಅಭಿಯಾನದಲ್ಲಿ ವಿದ್ಯಾರ್ಥಿಗಳಿಂದ ವೃತ್ತಿಪರರವರೆಗೆ, ನಾಗರಿಕರು ಜವಾಬ್ದಾರಿಯುತವಾಗಿ ಎಐ ಬಳಸುವುದಾಗಿ ಪ್ರತಿಜ್ಞೆ ಮಾಡಿದರು. ಮೊದಲ ದಿನವೇ 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

