IPL: ಸಂಜು ಶತಕದ ಆರ್ಭಟಕ್ಕೆ ಥಂಡಾ ಹೊಡೆದ ಡೆಲ್ಲಿ ಬೌಲರ್ಸ್, CSKಗೆ ಭರ್ಜರಿ ಗೆಲುವು

ಚೆನ್ನೈ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ 23 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ತಂಡದ ಪರ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 56 ಎಸೆತಗಳಲ್ಲಿ 15 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 115 ರನ್‌ಗಳನ್ನು ಅಜೇಯವಾಗಿ ಗಳಿಸಿ ಚೆನ್ನೈಗೆ ಭದ್ರ ಅಡಿಪಾಯ ಹಾಕಿದರು.

ಅಲ್ಲದೆ, ಆಯುಷ್ ಮ್ಹಾತ್ರೆ 36 ಎಸೆತಗಳಲ್ಲಿ 59 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಶಿವಂ ದುಬೆ 20 ರನ್‌ಗಳನ್ನು ಅಜೇಯವಾಗಿ ಸೇರಿಸಿದರೆ, ರುತುರಾಜ್ ಗಾಯಕ್ವಾಡ್ 15 ರನ್ ಗಳಿಸಿದರು. ಡೆಲ್ಲಿ ಪರ ಅಕ್ಷರ್ ಪಟೇಲ್ 1 ವಿಕೆಟ್ ಪಡೆದುಕೊಂಡರು.

213 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 189 ರನ್‌ಗಳಿಗೆ ಸೀಮಿತವಾಗಿ ಸೋಲು ಕಂಡಿತು.

ಇದನ್ನೂ ಓದಿ: ಪಂಜಾಬ್ ಕಿಂಗ್ಸ್ ಹಬ್ಬ: 220 ರನ್‌ಗಳ ಬೃಹತ್ ಗುರಿ ಬೆನ್ನತ್ತಿ ಸನ್‌ರೈಸರ್ಸ್‌ಗೆ ಶಾಕ್ ನೀಡಿದ ಪ್ರೀತಿ ಜಿಂಟಾ ಪಡೆ!

ಡೆಲ್ಲಿ ಪರ ಪಾತುಮ್ ನಿಸ್ಸಂಕ 41 ರನ್‌ಗಳನ್ನು ಗಳಿಸಿದರೆ, ಟ್ರಿಸ್ಟಾನ್ ಸ್ಟಬ್ಸ್ 60 ರನ್‌ಗಳ ಹೋರಾಟದ ಇನ್ನಿಂಗ್ಸ್ ಆಡಿದರು. ಉಳಿದಂತೆ ಕೆಎಲ್ ರಾಹುಲ್ 18, ಡೇವಿಡ್ ಮಿಲ್ಲರ್ 17, ಆಶುತೋಷ್ ಶರ್ಮಾ 19 ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕರೆದೊಯ್ಯಲು ಸಾಧ್ಯವಾಗಲಿಲ್ಲ.

ಚೆನ್ನೈ ಬೌಲಿಂಗ್ ವಿಭಾಗದಲ್ಲಿ ಜೇಮೀ ಓವರ್ಟನ್ ಅದ್ಭುತ ಪ್ರದರ್ಶನ ನೀಡಿ 4 ವಿಕೆಟ್ ಕಬಳಿಸಿ ಡೆಲ್ಲಿಯ ಬ್ಯಾಟಿಂಗ್ ಲೈನ್‌ಅಪ್ ಅನ್ನು ಕುಸಿತಕ್ಕೆ ತಳ್ಳಿದರು. ಅನ್ಶುಲ್ ಕಾಂಬೋಜ್ 3 ವಿಕೆಟ್ ಪಡೆದರೆ, ಖಲೀಲ್ ಅಹ್ಮದ್, ಗುರ್ಜಪ್ನೀತ್ ಸಿಂಗ್ ಹಾಗೂ ನೂರ್ ಅಹ್ಮದ್ ತಲಾ 1 ವಿಕೆಟ್ ಪಡೆದು ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು