ಐಪಿಎಲ್ 2026ರ ಆರಂಭ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಈ ನಡುವೆ SRH ನಾಯಕ ಇಶಾನ್ ಕಿಶನ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಈ ಪಂದ್ಯದಲ್ಲಿ 3000 ಐಪಿಎಲ್ ರನ್ ಮೈಲಿಗಲ್ಲು ತಲುಪಿದ ಕಿಶನ್, ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಕೇವಲ 2180 ಎಸೆತಗಳಲ್ಲಿ ಈ ಸಾಧನೆ ಮಾಡಿರುವ ಅವರು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

ಇದನ್ನೂ ಓದಿ: IPL Record: ಐಪಿಎಲ್ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹೊಸ ದಾಖಲೆ
ಈ ಪಟ್ಟಿಯಲ್ಲಿ ರಿಷಭ್ ಪಂತ್ (2028 ಎಸೆತ) ಮೊದಲ ಸ್ಥಾನದಲ್ಲಿದ್ದು, ಯೂಸುಫ್ ಪಠಾಣ್, ಸೂರ್ಯಕುಮಾರ್ ಯಾದವ್, ಸುರೇಶ್ ರೈನಾ ಮತ್ತು ಎಂಎಸ್ ಧೋನಿ ನಂತರ ಕಿಶನ್ ಸ್ಥಾನ ಪಡೆದಿದ್ದಾರೆ.
ಪಂದ್ಯದ ಮಧ್ಯಂತರ ಮಾಹಿತಿ ಪ್ರಕಾರ, ಇಶಾನ್ ಕಿಶನ್ 34 ಚೆಂಡುಗಳಲ್ಲಿ ಅಜೇಯ 72 ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಹೊರತೆಗೆದಿದ್ದಾರೆ. ಅವರ ಈ ಸ್ಪೋಟಕ ಬ್ಯಾಟಿಂಗ್ ತಂಡಕ್ಕೆ ಭರ್ಜರಿ ಮೊತ್ತ ಕಟ್ಟಿಕೊಡುವ ನಿರೀಕ್ಷೆ ಮೂಡಿಸಿದೆ. ಐಪಿಎಲ್ 2026ರ ಮೊದಲ ಪಂದ್ಯದಲ್ಲೇ ಈ ರೀತಿಯ ದಾಖಲೆ ಸಾಧನೆಯಿಂದ ಕಿಶನ್ ಮತ್ತೆ ಗಮನ ಸೆಳೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

