ಶಾಸಕರಿಗೆ ಗುಡ್ ನ್ಯೂಸ್: ಪ್ರತಿ ಐಪಿಎಲ್ ಪಂದ್ಯಕ್ಕೆ 3 ಟಿಕೆಟ್ ನೀಡಲು ಡಿಕೆಶಿ ಸಭೆಯಲ್ಲಿ ಮಹತ್ವದ ತೀರ್ಮಾನ!

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಟಿಕೆಟ್‌ಗಾಗಿ ಶಾಸಕರು ಇಟ್ಟಿದ್ದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಆರ್‌ಸಿಬಿ ಮ್ಯಾನೇಜ್‌ಮೆಂಟ್ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಶಾಸಕರಿಗೆ ಉಚಿತ ಟಿಕೆಟ್ ನೀಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪ್ರತಿ ಐಪಿಎಲ್ ಪಂದ್ಯಕ್ಕೆ ಒಬ್ಬ ಶಾಸಕರಿಗೆ ಒಟ್ಟು 3 ಟಿಕೆಟ್‌ಗಳನ್ನು ನೀಡಲು ಒಪ್ಪಿಗೆ ನೀಡಲಾಗಿದೆ. ಈ ಹಿಂದೆ 2 ಟಿಕೆಟ್ ನೀಡಲು ನಿರ್ಧರಿಸಲಾಗಿತ್ತು, ಆದರೆ ಈಗ ಒಂದು ಟಿಕೆಟ್ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಶಾಸಕರೊಬ್ಬರಿಗೆ ತಲಾ 2 ಟಿಕೆಟ್‌ಗಳನ್ನು ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ: ಆರ್‌ಸಿಬಿ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಎಂಎಸ್ ಧೋನಿ ಅಲಭ್ಯ! ಸಿಎಸ್‌ಕೆ ಅಭಿಮಾನಿಗಳಿಗೆ ಬಿಗ್ ಶಾಕ್!

ಕ್ರೀಡಾಂಗಣದಲ್ಲಿ ಆಸನಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ನೀಡುವಂತೆ ಕೆಎಸ್‌ಸಿಎ ಪದಾಧಿಕಾರಿಗಳಿಗೆ ಡಿಸಿಎಂ ಸೂಚಿಸಿದ್ದಾರೆ .ಶಾಸಕರು ಸದನದಲ್ಲಿ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿತ್ತು. “ಹೆಚ್ಚಿನ ಟಿಕೆಟ್ ಬೇಕಾದವರು ಹಣ ನೀಡಿ ಖರೀದಿಸಬೇಕು” ಎಂದು ಡಿಕೆ ಶಿವಕುಮಾರ್ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು