IPL: ಮಾರ್ಷ್ ಸಿಡಿಲಾಟಕ್ಕೆ ಮಣಿದ ಚೆನ್ನೈ; ಲಕ್ನೋಗೆ 7 ವಿಕೆಟ್‌ಗಳ ರೋಚಕ ಜಯ

ಏಕನಾ ಕ್ರಿಕೆಟ್ ಸ್ಟೇಡಿಯಂ ಬಿ ಮೈದಾನದಲ್ಲಿ ನಡೆದ ಐಪಿಎಲ್ ೫೯ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್, 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. ತಂಡದ ಪರ ಕಾರ್ತಿಕ್ ಶರ್ಮಾ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ 71 ರನ್ ಗಳಿಸಿದರು.

ಶಿವಂ ದುಬೆ 32 ರನ್‌ಗಳೊಂದಿಗೆ ಅಜೇಯರಾಗಿ ಉಳಿದರೆ, ಪ್ರಶಾಂತ್ ವೀರ್ 13 ರನ್‌ಗಳಿಸಿದರು. ಸಂಜು ಸ್ಯಾಮ್ಸನ್ 20, ಡೆವಾಲ್ಡ್ ಬ್ರೇವಿಸ್ 25, ರುತುರಾಜ್ ಗಾಯಕ್ವಾಡ್ 13 ಹಾಗೂ ಉರ್ವಿಲ್ ಪಟೇಲ್ 6 ರನ್ ಗಳಿಸಿದರು.

ಇದನ್ನೂ ಓದಿ: IPL: ಶಾರ್ದೂಲ್ ಬೌಲಿಂಗ್ ಕಮಾಲ್, ತಿಲಕ್ ಬ್ಯಾಟಿಂಗ್ ಅಬ್ಬರಕ್ಕೆ ಮಣಿದ ಪಂಜಾಬ್, ಗೆದ್ದ ಮುಂಬೈ

ಲಕ್ನೋ ಪರ ಆಕಾಶ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ 3 ವಿಕೆಟ್ ಪಡೆದುಕೊಂಡರು. ಶಹ್ಬಾಜ್ ಅಹ್ಮದ್ ಹಾಗೂ ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್ ಕಬಳಿಸಿದರು.

188 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್, ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 188 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು.

ಲಕ್ನೋ ಪರ ಮಿಚೆಲ್ ಮಾರ್ಷ್ ಸಿಡಿಲಾಟದ ಬ್ಯಾಟಿಂಗ್ ನಡೆಸಿದರು. ಕೇವಲ 38 ಎಸೆತಗಳಲ್ಲಿ 9 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ 90 ರನ್ ಸಿಡಿಸಿದ ಅವರು ರನ್ ಔಟ್ ಆಗಿ ಶತಕದಿಂದ ಕೇವಲ 10 ರನ್ ದೂರ ಉಳಿದರು.

ಜೋಶ್ ಇಂಗ್ಲಿಸ್ 36 ರನ್ ಗಳಿಸಿದರೆ, ನಿಕೋಲಸ್ ಪೂರನ್ 32 ರನ್‌ಗಳೊಂದಿಗೆ ಅಜೇಯರಾಗಿ ಉಳಿದರು. ಅಬ್ದುಲ್ ಸಮದ್ 7 ಹಾಗೂ ಮುಕುಲ್ ಚೌಧರಿ 13 ರನ್‌ಗಳೊಂದಿಗೆ ತಂಡವನ್ನು ಗೆಲುವಿನ ದಡ ಸೇರಿಸಿದರು.

ಚೆನ್ನೈ ಪರ ಮುಕೇಶ್ ಚೌಧರಿ ಹಾಗೂ ಸ್ಪೆನ್ಸರ್ ಜಾನ್ಸನ್ ತಲಾ ಒಂದು ವಿಕೆಟ್ ಪಡೆದುಕೊಂಡರು.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು