IPL: ಫಲಿಸದ ಡಿ ಕಾಕ್ ಶತಕ, ‘ಸಿಂಗ್’ ಪಂಚಾಬ್ ‘ಕಿಂಗ್’; ಮುಂಬೈಗೆ ಸೋಲು

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ತಂಡದ ಪರ ಕ್ವಿಂಟನ್ ಡಿ ಕಾಕ್ ಅಬ್ಬರದ ಶತಕ ಸಿಡಿಸಿದರು. ಅವರು 60 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸ್‌ಗಳ ನೆರವಿನಿಂದ 112 ರನ್ ಗಳಿಸಿ ಅಜೇಯರಾಗಿ ಉಳಿದರು.

Advertisement

ಇನ್ನೊಬ್ಬ ಬ್ಯಾಟರ್ ನಮನ್ ಧೀರ್ 50 ರನ್ ಗಳಿಸಿ ಉತ್ತಮ ಬೆಂಬಲ ನೀಡಿದರು. ಆದರೆ ಉಳಿದ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಹಾರ್ದಿಕ್ ಪಾಂಡ್ಯ 14, ರಯಾನ್ ರಿಕೆಲ್ಟನ್ 2, ಶೆರ್ಫೇನ್ ರುದರ್ಫೋರ್ಡ್ 1, ತಿಲಕ್ ವರ್ಮಾ 8 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ ಶೂನ್ಯಕ್ಕೆ ಔಟ್ ಆದರು. ಮಯಾಂಕ್ ರಾವತ್ ಕ್ರೀಸ್‌ನಲ್ಲಿ ಅಜೇಯರಾಗಿ ಉಳಿದರು.

ಇದನ್ನೂ ಓದಿ: IPL: ಲಕ್ನೋ ವಿರುದ್ಧ ತವರಿನಲ್ಲಿ ಗೆದ್ದು ಬೀಗಿದ ಆರ್‌ಸಿಬಿ

Advertisement

ಪಂಜಾಬ್ ಕಿಂಗ್ಸ್ ಪರ ಅರ್ಶದೀಪ್ ಸಿಂಗ್ 3 ವಿಕೆಟ್ ಪಡೆದು ಮಿಂಚಿದರೆ, ಶಶಾಂಕ್ ಸಿಂಗ್ ಹಾಗೂ ಮಾರ್ಕೊ ಜಾನ್ಸೆನ್ ತಲಾ 1 ವಿಕೆಟ್ ಪಡೆದುಕೊಂಡರು.

196 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 16.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿ ಸುಲಭ ಗೆಲುವು ಸಾಧಿಸಿತು.

ಪಂಜಾಬ್ ಪರ ಪ್ರಭಸಿಮ್ರನ್ ಸಿಂಗ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 35 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸ್‌ಗಳೊಂದಿಗೆ 80 ರನ್ ಸಿಡಿಸಿ ಅಜೇಯರಾಗಿ ಉಳಿದರು. ಪ್ರಿಯಾಂಶ್ ಆರ್ಯ 15, ಕೂಪರ್ ಕಾನೋಲಿ 17 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 66, ಮರ್ಕಸ್ ಸ್ಟೊಯಿನಿಸ್ ಅವರು ಅಜೇಯರಾಗಿ 10 ರನ್ ಗಳಿಸಿದರು.

ಮುಂಬೈ ಪರ ಅಲ್ಲಾ ಘಜನ್ಫರ್ 2 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ 1 ವಿಕೆಟ್ ಪಡೆದುಕೊಂಡರು.

ಪಂಜಾಬ್ ತಂಡದ ಆಕ್ರಮಣಕಾರಿ ಬ್ಯಾಟಿಂಗ್ ಮುಂದೆ ಮುಂಬೈ ಬೌಲರ್‌ಗಳು ಅಸಹಾಯಕರಾದರು. ಪರಿಣಾಮ ಡಿ ಕಾಕ್ ಶತಕವೂ ಮುಂಬೈಗೆ ಗೆಲುವು ತಂದುಕೊಡಲಿಲ್ಲ.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು