ಬೆಂಗಳೂರು: ಐಪಿಎಲ್ ಪಂದ್ಯಗಳ ಟಿಕೆಟ್ ಹಂಚಿಕೆ ವಿಚಾರ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಪ್ರತಿಯೊಬ್ಬ ಶಾಸಕರಿಗೆ ಕನಿಷ್ಠ ಐದು ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಆಗ್ರಹಿಸಿದ್ದಾರೆ.
“ನಾವು ಶಾಸಕರು VIPಗಳು. ಸಾಲಿನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಕಳೆದ ಬಾರಿ ಸಾರ್ವಜನಿಕರ ಜೊತೆಗೆ ಗ್ಯಾಲರಿಯಲ್ಲಿ ಕುಳ್ಳಿರಿಸಲಾಗಿತ್ತು, ಇದು ಸರಿಯಲ್ಲ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

KSCA ಸರ್ಕಾರದಿಂದ ಭದ್ರತೆ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯುತ್ತಿದ್ದರೂ, ಜನಪ್ರತಿನಿಧಿಗಳಿಗೆ ಗೌರವ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು. ಆನ್‌ಲೈನ್ ಟಿಕೆಟ್ ಮಾರಾಟದಲ್ಲಿ ಕಾಳಬಜಾರ್ ನಡೆಯುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದರು.
ಇದನ್ನೂ ಓದಿ: ಐಪಿಎಲ್ ಅಭಿಮಾನಿಗಳಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್! ಮುಂಜಾನೆ 2 ಗಂಟೆಯವರೆಗೆ ಮೆಟ್ರೋ ಸೇವೆ
ವಿಧಾನಸಭೆಯಲ್ಲಿ ಈ ವಿಷಯವನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕೂಡ ಎತ್ತಿ ಹಿಡಿದಿದ್ದರು. “ಸರ್ಕಾರವು ಅಲ್ಪ ದರಕ್ಕೆ ಜಾಗ ನೀಡಿದರೂ, KSCA ಟಿಕೆಟ್‌ಗಳಿಗೆ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದೆ” ಎಂದು ಅವರು ಕಿಡಿಕಾರಿದರು.
ಈ ಕುರಿತು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಸರ್ಕಾರ KSCA ಜೊತೆ ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಈ ವಿಷಯವನ್ನು KSCA ಅಧ್ಯಕ್ಷರೊಂದಿಗೆ ಚರ್ಚಿಸಿ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

