ಕೊಲೊಂಬೊ: ಟಿ-20 ವಿಶ್ವಕಪ್‌ನ ‘ಬಿ’ ಗುಂಪಿನ ಪಂದ್ಯದಲ್ಲಿ ಓಮನ್ ತಂಡದ ವಿರುದ್ಧ ಐರ್ಲೆಂಡ್ ತಂಡ 96 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
ಇಲ್ಲಿನ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಓಮನ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಭರ್ಜರಿ 235 ರನ್ ಗಳಿಸಿತು.

ಇದನ್ನೂ ಓದಿ::ಅಮೆರಿಕದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನಾಪತ್ತೆ
ತಂಡದ ಪರ 51 ಎಸೆತಗಳಲ್ಲಿ ಅಜೇಯ 94 ರನ್ ಗಳಿಸಿದರು. ಗೆರೆತ್ ಡೆಲಾನಿ 56, ಜಾರ್ಜ್ ಡಾಕ್ರೆಲ್ 35 ರನ್ ಗಳಿಸಿದರು. ಓಮನ್ ಪರ ಶಕೀಲ್ ಅಹಮ್ಮದ್, ಶಾ ಫೈಸಲ್ ಮತ್ತು ಆಮೀರ್ ಕಲೀಮ್ ತಲಾ ಒಂದು ವಿಕೆಟ್ ಪಡೆದರು.
ಗುರಿ ಬೆನ್ನತ್ತಿದ ಓಮನ್ ತಂಡ 18 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ 96 ರನ್‌ಗಳ ಅಂತರದಿಂದ ಸೋಲು ಕಂಡಿತು. ಓಮನ್ ಪರ ಆಮೀರ್ ಖಲೀಮ್ 50, ಹಮ್ಮದ್ ಮಿರ್ಜಾ 46 ರನ್ ಗಳಿಸಿದರು. ಐರ್ಲೆಂಡ್ ಪರ ಜೋಶುವ ಲಿಟ್ಲ್ 3, ಮ್ಯಾಥ್ಯು ಹಂಪ್ರೆಯ್ಸ್ ಮತ್ತು ಬೆರ್ರಿ ಮೆಕರ್ತಿ ತಲಾ 2 ವಿಕೆಟ್ ಪಡೆದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

