Breaking News

ಕ್ರೈಸ್ತ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ ನೀಡಲು ಐವನ್ ಡಿಸೋಜಾ ಆಗ್ರಹ

ಬೆಂಗಳೂರು : ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯಕ್ಕೆ ಅವರ ಜನಸಂಖ್ಯೆಗೆ ಅನುಗುಣವಾಗಿ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಇತರ ಬಲವಾದ ವರ್ಗಗಳೊಂದಿಗೆ ಸ್ಪರ್ಧಿಸುವುದು ಕ್ರೈಸ್ತ ಸಮುದಾಯಕ್ಕೆ ಕಷ್ಟಕರವಾಗಿದೆ. ಆದ್ದರಿಂದ ಅಲ್ಪಸಂಖ್ಯಾತರ ಮೀಸಲಾತಿ ವರ್ಗದಲ್ಲೇ ಪ್ರತ್ಯೇಕ ‘ಸಿ’ (Category C) ವರ್ಗವನ್ನು ಸೃಷ್ಟಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.

ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಕಾಳಜಿ ವಹಿಸಿ, ಕೂಡಲೇ ವಿಶೇಷ ಪರಿಶೀಲನಾ ಸಮಿತಿ ರಚಿಸಿ ವರದಿ ತರಿಸಿಕೊಳ್ಳಬೇಕು ಹಾಗೂ ಸಮುದಾಯದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಐವನ್ ಡಿಸೋಜಾ ಕೋರಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪರವಾಗಿ ಉತ್ತರಿಸಿದ ಸಚಿವ ಯು.ಟಿ. ಖಾದರ್, “ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಕಾಂತರಾಜು ವರದಿ) ಆಧರಿಸಿ ಮೀಸಲಾತಿ ಮತ್ತು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪ್ರಸ್ತುತ ಇರುವ ಅಲ್ಪಸಂಖ್ಯಾತರ ಮೀಸಲಾತಿಯಲ್ಲಿ ಕ್ರೈಸ್ತರಿಗೂ ಅವಕಾಶ ಕಲ್ಪಿಸಲಾಗಿದೆ” ಎಂದರು. ಶಾಸಕರ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಮುಂದಿನ ಸೂಕ್ತ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ: ಡ್ಯಾನ್ಸ್ ಚಿತ್ರೀಕರಣದಲ್ಲಿ ರಶ್ಮಿಕಾ ಮಂದಣ್ಣಗೆ ಅಪರೂಪದ ಹಿಪ್ ಇಂಜುರಿ! ರಣಬಾಳಿ ಅಥವಾ ಮೈಸಾ ಶೂಟಿಂಗ್‌ ವಿಳಂಬ

ಕ್ರೈಸ್ತ ಸಮುದಾಯದ ಸುದೀರ್ಘ ಬೇಡಿಕೆಯಂತೆ ಪ್ರತ್ಯೇಕ ಕ್ರೈಸ್ತ ಅಭಿವೃದ್ಧಿ ನಿಗಮ ರಚಿಸಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸುಸಜ್ಜಿತ ಭವನ ನಿರ್ಮಾಣಕ್ಕಾಗಿ ಸೂಕ್ತ ಸಿಎ ಸೈಟ್ (CA Site) ಅಥವಾ ಜಾಗವನ್ನು ಗುರುತಿಸಲು ಸೂಚನೆ ನೀಡಲಾಗುವುದು ಎಂದು ಸಚಿವರು ಸದನಕ್ಕೆ ತಿಳಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *