Breaking News

Breaking: ಧಗಧಗನೆ ಹೊತ್ತಿ ಉರಿದ ರೆಡ್ಡಿಯ ಮಾಡೆಲ್ ಹೌಸ್

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಮಾಲೀಕತ್ವದ ಮಾಡೆಲ್ ಹೌಸ್ ಗೆ ಶುಕ್ರವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಇಡೀ ಕಟ್ಟಡ ಧಗಧಗ ಹೊತ್ತಿ ಉರಿದಿದೆ.

ಬಳ್ಳಾರಿಯ ಕಂಟೋನ್‌ಮೆಂಟ್ ಬಳಿ ಇರುವ ಜನಾರ್ದನ್ ರೆಡ್ಡಿ ಒಡೆತನದ ಜಿ ಸ್ಮರ್ ಲೇಔಟ್ ನಲ್ಲಿರುವ ಮಾಡೆಲ್ ಹೌಸ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

Advertisement

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದು, ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: T-20I: ಇಶಾನ್, ಸೂರ್ಯಕುಮಾರ್ ಅರ್ಧಶತಕ, ಭಾರತಕ್ಕೆ ಜಯ

ಘಟನೆ ಸಂಬಂಧ ಬಳ್ಳಾರಿ ಎಸ್‌ಪಿ ಜೊತೆ ಜನಾರ್ದನ್ ರೆಡ್ಡಿ ಚರ್ಚೆ ನಡೆಸಿದ್ದು ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿರುವ ಬೆಂಗಳೂರಿನಲ್ಲಿರುವ ಶಾಸಕ ಜನಾರ್ದನ ರೆಡ್ಡಿ, ಅಧಿವೇಶನ ಮುಗಿಸಿ ಬಳ್ಳಾರಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖ‌ರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನ‌ರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು (ಜನವರಿ 23) ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಬ್ಯಾನರನ ಘಟನೆ ನಡೆದು 15 ದಿನ ಕೂಡ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿರುವುದು ದುರಂತ. ಬಳ್ಳಾರಿಗೆ ಬಂದ ನಂತರ ಎಸ್ಪಿ ಜೊತೆ ಮಾತನಾಡುತ್ತೇನೆ ಎಂದು ಜನಾರ್ಧನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು