Breaking News

ಜಂಪ್ ರೋಪ್ ಸ್ಪರ್ಧೆ: ಕೊಯಿಲ ಸರ್ಕಾರಿ ಶಾಲೆಯ ರಂಜನ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Jump rope competition Ranjan from Koila School selected for national level

ಬಂಟ್ವಾಳ: ಬೆಂಗಳೂರಿನ ಜೆಪಿ ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಾರಕ್ಕಿಯಲ್ಲಿ ನಡೆದ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಂಜನ್‌ ಕುಮಾರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಅದರಂತೆ, ರಂಜನ್‌ ಅವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಅವರು ತರಬೇತಿ ನೀಡಿದ್ದಾರೆ. ಮುಖ್ಯ ಶಿಕ್ಷಕಿ ಸೌಜನ್ಯ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಹಾಗೂ ಸಹಶಿಕ್ಷಕರು ರಂಜನ್‌ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

Advertisement

ಇದನ್ನೂ ಓದಿ: ಎರಡನೇ ಮದುವೆಯಾದ ಶಿಖರ್ ಧವನ್‌ಗೆ ಗುಡ್ ನ್ಯೂಸ್!!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು