ಕಡಬ: ಕಂಟೇನರ್‌ನಲ್ಲಿ ಅಕ್ರಮ ಜಾನುವಾರು ಸಾಗಾಟ; 18 ಜಾನುವಾರುಗಳ ರಕ್ಷಣೆ, ಓರ್ವನ ಬಂಧನ

ಕಡಬ, ಏಪ್ರಿಲ್ 03: ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಕಡಬ ಠಾಣಾ ಸಬ್ ಇನ್ಸ್‌ಪೆಕ್ಟ‌ರ್ ಜಂಬೂರಾಜ್ ಮಹಾಜನ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದೆ.

ಹೊಸೂರು ಮೂಲದ ಅಕ್ರಮ್ ಪಾಷಾ ಬಂಧಿತ ಆರೋಪಿ. ಈತ ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳದ ಕಡೆಗೆ ಕಂಟೇನರ್ ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಈ ಅಕ್ರಮ ಬಯಲಾಗಿದೆ.

ಇದನ್ನೂ ಓದಿ: ಪ್ರಾಣಿ ಪ್ರೇಮಕ್ಕೆ ಸಾಕ್ಷಿಯಾದ ಅಪರೂಪದ ಘಟನೆ: ಅಜ್ಜಿಯ ಅಗಲಿಕೆಗೆ ಕಂಬನಿ ಮಿಡಿದ ಮಂಗ!

ಕಂಟೇನರ್‌ನಲ್ಲಿ ಸುಮಾರು 18 ಜಾನುವಾರುಗಳನ್ನು ಅತ್ಯಂತ ಅಮಾನುಷವಾಗಿ ತುಂಬಲಾಗಿತ್ತು ಎಂದು ತಿಳಿದುಬಂದಿದೆ. ಪೊಲೀಸರು ವಾಹನ ತಡೆದ ಸಂದರ್ಭದಲ್ಲಿ ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು