ನಗ್ರಿ ಶಾರದಾ ಭಜನಾ ಮಂದಿರದಲ್ಲಿ ಕಲ್ಲಡ್ಕ ಶ್ರೀರಾಮ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರ ಪ್ರಾರಂಭ

Kalladka Sri Rama College's NSS camp begins at Nagri School

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಎನ್‌ಎಸ್‌ಎಸ್‌ ಶಿಬಿರವು ಬಂಟ್ವಾಳ ತಾಲೂಕಿನ ಬೊಳ್ಳಾಯಿ ಸಮೀಪದ ನಗ್ರಿ ಶಾರದಾ ಭಜನಾಮಂದಿರದಲ್ಲಿ ಜ.29 ರಿಂದ ಪ್ರಾರಂಭವಾಯಿತು.

ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾಕೇಂದ್ರದ ಸಂಚಾಲಕ ವಸಂತಮಾಧವ ಹಾಗೂ ಉಪಸ್ಥಿತರಿದ್ದ ಅತಿಥಿಗಳು ದೀಪ ಪ್ರಜ್ವಲಿಸಿ ಶಿಬಿರದ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ವಸಂತಮಾಧವ, ಇಂತಹ ಎನ್ ಎಸ್ ಎಸ್ ಶಿಬಿರವು ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಬಹಳ ಅಗತ್ಯ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಈ ಶಿಬಿರವು ಅತ್ಯಂತ ಸಹಕಾರಿಯಾಗಿದೆ. ಇದರ ಚಟುವಟಿಕೆಗಳ ಉದ್ದೇಶವನ್ನು ತಿಳಿದು ಭಾಗವಹಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇದನ್ನೂ ಓದಿ: ಮಂಚಿಯಲ್ಲಿ ಎಸ್.ವಿ.ಎಸ್ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಸಜಿಪನಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಕುಮಾರಿ, ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಶಾರದಾ ಭಜನಾಮಂದಿರದ ಅಧ್ಯಕ್ಷ ಕೃಷ್ಣಪ್ಪ ಕುಲಾಲ್ ಕೊಳಂಬೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಜೆನಿಫರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಬೊಳ್ಳಾಯಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಯತಿರಾಜ್ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಒಂದು ವಾರಗಳ ಕಾಲ ನಡೆಯುವ ಈ ಶಿಬಿರದ ಅಗತ್ಯತೆ, ದಿನಚರಿ, ಇತರ ಕಾರ್ಯಕಲಾಪಗಳ ಬಗ್ಗೆ ವಿವರಿಸಿದರು.  ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ ವಿನುತಾಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸಹಸಂಯೋಜಕ ದೀಕ್ಷಿತ್, ಸಂಸ್ಕೃತ ಉಪನ್ಯಾಸಕಿ ಪ್ರಸನ್ನಾ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ನಾಯಕಿ ಕು. ಪ್ರಜ್ಞಾ ಸ್ವಾಗತಿಸಿ, ಬಿಸಿಎ ವಿದ್ಯಾರ್ಥಿ ಜಯಸೂರ್ಯ ವಂದಿಸಿ, ಬಿಕಾಂ ವಿದ್ಯಾರ್ಥಿನಿ ಕು. ಧನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿ ನಿಖಿಲ್ ಪ್ರಾರ್ಥನೆಗೈದರು. ಸಭಾ ಕಾರ್ಯಕ್ರಮದ ನಂತರ ಗಣ್ಯರಿಂದ  ಶ್ರಮದಾನದ ಉದ್ಘಾಟನೆ ನೆರವೇರಿತು. ಒಟ್ಟು ೬೭ ಮಂದಿ ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ 

(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com)

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು