Breaking News

ಕಂಬಳಕ್ಕೆ ಸರ್ಕಾರದಿಂದ ಆರ್ಥಿಕ ಸಹಾಯ; ಬಂಟ್ವಾಳ ತಾಲೂಕು ಕ್ರೀಡಾಂಗಣಕ್ಕೆ ನಿಧಿ: ಸಿದ್ದರಾಮಯ್ಯ ಘೋಷಣೆ

kambala-support-announced-by-cm-siddaramaiah-bantwal

ಮಂಗಳೂರು: ಕರ್ನಾಟಕದಲ್ಲಿ ನಡೆಯುವ ಪಾರಂಪರಿಕ ಕ್ರೀಡೆ ಕಂಬಳಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಂಬಳ ಆಯೋಜನೆಗೆ ಅಗತ್ಯವಾದ ಆರ್ಥಿಕ ಸಹಾಯವನ್ನು ಸರ್ಕಾರದಿಂದ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲ್‌ನಲ್ಲಿ ಶನಿವಾರ ನಡೆದ 15ನೇ ವರ್ಷದ ಮೂದೂರು–ಪಡೂರು ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅರ್ಥಪೂರ್ಣ ಬದಲಾವಣೆ ತರಲು ಮುಖ್ಯಮಂತ್ರಿ ಸ್ಥಾನದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

Advertisement

ರಾಜ್ಯ ಸರ್ಕಾರ ಬಡವರು, ಕಾರ್ಮಿಕರು ಮತ್ತು ಮಹಿಳೆಯರ ಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ ಸಿದ್ದರಾಮಯ್ಯ, ಸಮಾಜದ ಅತಿ ಹಿಂದುಳಿದ ವರ್ಗಗಳೂ ಮುಖ್ಯಪ್ರವಾಹಕ್ಕೆ ಬರಬೇಕು ಎಂಬ ಉದ್ದೇಶದಿಂದ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಸಮಾಜದ ಕೊನೆಯ ವ್ಯಕ್ತಿಗೂ ಅಭಿವೃದ್ಧಿಯ ಲಾಭ ತಲುಪುವಂತೆ ಮಾಡಲು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಅವರು ಹೇಳಿದರು. ಜೊತೆಗೆ 2028ರಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇನ್ನೂ ಸುಲಭವಾಗಲಿದೆ ಮಂಗಳೂರು–ಬೆಂಗಳೂರು ಪ್ರಯಾಣ; ಉದ್ಯೋಗಿಗಳಿಗೆ ಅನುಕೂಲ

ಕಂಬಳ ಎಲ್ಲರ ಕ್ರೀಡೆ

ಕಂಬಳವು ಜನಪ್ರಿಯ ಪಾರಂಪರಿಕ ಕ್ರೀಡೆಯಾಗಿದ್ದು, ಇದು ಜಾತಿ–ಧರ್ಮಗಳನ್ನು ಮೀರಿ ಎಲ್ಲಾ ಸಮುದಾಯದವರು ಸೇರಿ ನಡೆಸುವ ಕ್ರೀಡೆ ಎಂದು ಸಿಎಂ ಹೇಳಿದರು. ಕಂಬಳವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕಂಬಳವನ್ನು ಮೈಸೂರು ನಗರದಲ್ಲಿಯೂ ಆಯೋಜಿಸುವ ಆಸಕ್ತಿ ವ್ಯಕ್ತವಾಗಿದೆ ಎಂದು ತಿಳಿಸಿದ ಅವರು, ಯುವಜನರಲ್ಲಿ ಈ ಪಾರಂಪರಿಕ ಕ್ರೀಡೆಯನ್ನು ಹೆಚ್ಚು ಜನಪ್ರಿಯಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಬಂಟ್ವಾಳ ತಾಲೂಕು ಕ್ರೀಡಾಂಗಣಕ್ಕೆ ನಿಧಿ

ಬಂಟ್ವಾಳದಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಕ್ರೀಡಾಂಗಣಕ್ಕೆ ಮುಂದಿನ ಆರ್ಥಿಕ ವರ್ಷದಲ್ಲಿ ನಿಧಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಘೋಷಿಸಿದರು. ಈ ಯೋಜನೆಗಾಗಿ ಬೆಂಜನಪದವಿನಲ್ಲಿ ಸುಮಾರು 10 ಎಕರೆ ಜಾಗವನ್ನು ಗುರುತಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.‌

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು