ಮದುವೆಯಾದ ನಾಲ್ಕೇ ವರ್ಷಕ್ಕೆ ದೂರಾಗಲಿದ್ದಾರೆ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ!; ಕೋರ್ಟ್ ಮೆಟ್ಟಿಲೇರಿದ ಜೋಡಿ!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದುಕೊಳ್ಳಲಿದ್ದಾರೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ (Mutual Consent) ವಿಚ್ಛೇದನ ಕೋರಿ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಇಷ್ಟು ದಿನ ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಈ ದಂಪತಿಯ ಬಾಳಲ್ಲಿ ಏಕಾಏಕಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಈಗ ಅಭಿಮಾನಿಗಳನ್ನು ತೀವ್ರವಾಗಿ ಕಾಡುತ್ತಿದೆ.

ಕನ್ನಡದ ಸಾರ್ವಕಾಲಿಕ ಸೂಪರ್ ಹಿಟ್ ಸಿನಿಮಾ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಹೊಸತರಲ್ಲಿ ಈ ದಂಪತಿ ಅತ್ಯಂತ ಆಪ್ತವಾಗಿ ಹಾಗೂ ಸಂತೋಷದಿಂದ ಕಾಲ ಕಳೆದಿದ್ದರು. ಆದರೆ, ಈಗ ನಾಲ್ಕು ವರ್ಷ ಕಳೆಯುವಷ್ಟರಲ್ಲೇ ಇಬ್ಬರೂ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿದ ರಾಮ್ ಚರಣ್ ಅಭಿಮಾನಿ; ಬೆಚ್ಚಿಬಿದ್ದ ನಟಿ ಜಾನ್ವಿ ಕಪೂರ್, ಬಾಡಿಗಾರ್ಡ್ ಕೆವಿನ್ ಭರ್ಜರಿ ಆ್ಯಕ್ಷನ್!

ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಆದರೆ, ಇಬ್ಬರ ನಡುವಿನ ಮುನಿಸಿಗೆ ಹಾಗೂ ಈ ವಿಚ್ಛೇದನ ನಿರ್ಧಾರಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಪತಿ ಸುಮಂತ್ ನಿರಾಕರಿಸಿದ್ದಾರೆ. ಈ ನಡುವೆ ಶುಭಾ ಪೂಂಜಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಸೇರಿದಂತೆ ಸೋಶಿಯಲ್ ಮೀಡಿಯಾ ಖಾತೆಗಳಿಂದ ಪತಿ ಜೊತೆಗಿನ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡುವ ಮೂಲಕ ವಿರಸದ ವದಂತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು