ಕೆನಡಾ: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್(37) ಕಾರಿನಲ್ಲಿ ತೆರಳುತ್ತಿದ್ದಾಗ ಹತ್ತಾರು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
6 ವರ್ಷದಿಂದ ಕೆನಡಾದಲ್ಲಿದ್ದ ಚಂದನ್ ಎಲ್‌ಎನ್‌ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪೋಷಕರಿಗೆ ನಿನ್ನೆ ಟೊರೊಂಟೋ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ.

ಇದನ್ನೂ ಓದಿ: Daily Horoscope 10 February: ಇಂದು ಈ ರಾಶಿಯವರಿಗೆ ದೊಡ್ಡ ಮಟ್ಟದ ಲಾಭವಾಗಲಿದೆ
ಚಂದನ್ ಕೆನಡಾದ ವುಡ್‌ಬೈನ್ ಮಾಲ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ದುಷ್ಕರ್ಮಿಗಳು ಗುಂಡಿನ ಸುರಿಮಳೆ ಸುರಿಸಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಭಾರತದ ಮಣ್ಣಲ್ಲೇ ಆತನ ಮೃತದೇಹ ಅಂತ್ಯಸಂಸ್ಕಾರ ಮಾಡುವ ಆಸೆ ಪೋಷಕರಿಗೆ ಇದೆ. ಕೆನಡಾದಿಂದ ಮೃತದೇಹವನ್ನು ಭಾರತಕ್ಕೆ ತರುವುದು ಹೇಗೆ ಎಂಬ ಚಿಂತೆಯಲ್ಲಿ ಪೋಷಕರಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

