ಕಾರ್ಕಳದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ರಿಕ್ಷಾ ಚಾಲಕ ಅರೆಸ್ಟ್

karkala-auto-driver-arrested-minor-Physical-harassment-case-kannada

ಕಾರ್ಕಳ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ ವಸಂತ ಪೂಜಾರಿ (52) ಎಂದು ಗುರುತಿಸಲಾಗಿದೆ. ಆತ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದನು.

ಇದನ್ನೂ ಓದಿ: ಉಡುಪಿ: ನಿಯಂತ್ರಣ ತಪ್ಪಿ ಸ್ಕೂಟರ್ ದೈವಸ್ಥಾನದ ಗೋಡೆಗೆ ಡಿಕ್ಕಿ; ತಾಯಿ ಸಾವು, ಪುತ್ರನಿಗೆ ಗಂಭೀರ ಗಾಯ!

ಮಾಹಿತಿಯ ಪ್ರಕಾರ, ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮನೆಗೆ ಬಿಡುವುದಾಗಿ ಹೇಳಿ ಪುಸಲಾಯಿಸಿ ರಿಕ್ಷಾದಲ್ಲಿ ಹತ್ತಿಸಿಕೊಂಡು, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕಾರ್ಕಳ ನಗರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು