ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅನುತ್ತೀರ್ಣರಾದ ಅಥವಾ ಅಂಕ ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಎರಡನೇ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದಾರೆ.
ದಿನಾಂಕಗಳು:

ಪರೀಕ್ಷೆ-2 ಆರಂಭ: ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆಯು ಮೇ 15, 2026 ರಿಂದ ಮೇ 22, 2026 ರವರೆಗೆ ನಡೆಯಲಿದೆ.
ನೋಂದಣಿಗೆ ಕೊನೆಯ ದಿನಾಂಕ: ದಂಡವಿಲ್ಲದೆ ಅರ್ಜಿ ಸಲ್ಲಿಸಲು ಏಪ್ರಿಲ್ 16, 2026 ಕೊನೆಯ ದಿನವಾಗಿದೆ.

ಮರು ಮೌಲ್ಯಮಾಪನ (Revaluation): ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: 2nd PUC ಫಲಿತಾಂಶ ಪ್ರಕಟ: ರಾಜ್ಯದ ಒಟ್ಟಾರೆ ಪಾಸಿಂಗ್ ಶೇ. 86ಕ್ಕೆ ಏರಿಕೆ; ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಸಾಧನೆ!

“ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಬಾರದು ಎಂಬ ಕಾರಣಕ್ಕೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದವರು ಎರಡನೇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಅವಕಾಶವಿದೆ.” ಈ ಬಾರಿ ಶೇ. 86ರಷ್ಟು ಫಲಿತಾಂಶ ಬಂದಿರುವುದು ಸಮಾಧಾನಕರ ತಂದಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

