ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿ ನೀಡಿದ್ದಾರೆ. ನಾಳೆ, ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ.
ರಾಜ್ಯದಲ್ಲಿ ನಾಳೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮತದಾನ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಅಂದರೆ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಇದನ್ನೂ ಓದಿ: ಐಪಿಎಲ್ ಹೈ ಪ್ರೊಫೈಲ್ ಪಂದ್ಯದ ಮೇಲೆ ಕಾಳಬಜಾರ್ ಕರಿಛಾಯೆ, ತನಿಖೆಗೆ ಇಳಿದ ಖಾಕಿ ಪಡೆ
ಪರೀಕ್ಷೆಯ ಅಂಕಿ-ಅಂಶಗಳು:

ಒಟ್ಟು ವಿದ್ಯಾರ್ಥಿಗಳು: 7,10,363
ಪರೀಕ್ಷಾ ಕೇಂದ್ರಗಳು: 1,217

ಪರೀಕ್ಷಾ ದಿನಾಂಕ: ಫೆಬ್ರವರಿ 28 ರಿಂದ ಮಾರ್ಚ್ 17, 2026
ಫಲಿತಾಂಶ ನೋಡುವುದು ಹೇಗೆ?
ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು
ಹಂತ 1: ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗುವುದು.
ಹಂತ 2: ಈಗ, ಮುಖಪುಟದಲ್ಲಿ, “ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026” ಎಂದು ಸೂಚಿಸುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಪರದೆಯ ಮೇಲೆ ಹೊಸ ಲಾಗಿನ್ ವಿಂಡೋ ಕಾಣಿಸಿಕೊಳ್ಳುತ್ತದೆ.
ಹಂತ 4: ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆಯಂತಹ ಲಾಗಿನ್ ರುಜುವಾತುಗಳನ್ನು ನಮೂದಿಸಿ.
ಹಂತ 5: ಕರ್ನಾಟಕದ ದ್ವಿತೀಯ ಪಿಯುಸಿ ಅಂಕಗಳ ಮೆಮೊ ನಿಮ್ಮ ಪರದೆಯ ಮೇಲೆ ಪ್ರದರ್ಶನಗೊಳ್ಳುತ್ತದೆ.
ಹಂತ 6: ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಬೇಕಾದರೆ ಅದನ್ನು ಕಾಪಿಯನ್ನು ತೆಗೆದುಕೊಳ್ಳಬಹುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

