ಬೆಂಗಳೂರು: ಇಂದು (ಮಾರ್ಚ್ 6, 2026) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಅಕ್ಷರಶಃ ಬೆಂಗಳೂರು ಕೇಂದ್ರಿತವಾಗಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗಗಳಿಗೆ ಭಾರಿ ನಿರಾಸೆ ಮೂಡಿಸಿದೆ. ವಿಶೇಷವಾಗಿ ದಕ್ಷಿಣ ಕನ್ನಡದ ಜೀವನಾಡಿಯಾಗಿರುವ ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ಯಾವುದೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಯಾಗದಿರುವುದು ಕೃಷಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕರಾವಳಿ ಕಡೆಗಣಿಸಿದ ಬಗ್ಗೆ ಟೀಕಿಸಿದ ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ, ದ.ಕ ಜಿಲ್ಲೆಯ ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದ ನಿರಾಶಾದಾಯಕ ಬಜೆಟ್ ಇದು ಎಂದರು.

ಇದನ್ನೂ ಓದಿ: ಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!
ಬಜೆಟ್ನ ಬಹುಪಾಲು ಯೋಜನೆಗಳು ಬೆಂಗಳೂರು ಕೇಂದ್ರಿತವಾಗಿದ್ದು, ಕರಾವಳಿ ಕರ್ನಾಟಕ,ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗಗಳಿಗೆ ಕೇವಲ ಅಲ್ಪ ಅನುದಾನ ನೀಡಿ ಕೈತೊಳೆದುಕೊಳ್ಳಲಾಗಿದೆ. ಎರಡನೇ ವಿಮಾನ ನಿಲ್ದಾಣದಂತಹ ದೊಡ್ಡ ಯೋಜನೆಗಳು ಬೆಂಗಳೂರಿಗೇ ಸೀಮಿತವಾಗುತ್ತಿರುವುದು ಪ್ರಾದೇಶಿಕ ಅಸಮತೋಲನವನ್ನು ಎತ್ತಿ ತೋರಿಸುತ್ತದೆ ಎಂದರು.
ಒಟ್ಟಾರೆಯಾಗಿ, 2026ರ ಬಜೆಟ್ ದೂರದೃಷ್ಟಿಯ ಕೊರತೆಯಿಂದ ಕೂಡಿದೆ. ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಹೆಸರಿನಲ್ಲಿ ಸಾಮಾನ್ಯ ಜನರ ಮೇಲೆ ತೆರಿಗೆಯ ಹೊರೆ ಅಥವಾ ಪರೋಕ್ಷ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರವು ಕೇವಲ ಅಂಕಿ-ಅಂಶಗಳ ಮೂಲಕ ಜನರನ್ನು ಮರುಳು ಮಾಡದೆ, ಪ್ರಾಯೋಗಿಕ ಅಭಿವೃದ್ಧಿಗೆ ಒತ್ತು ನೀಡಬೇಕಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

