ಅನ್ನಭಾಗ್ಯ ಯೋಜನೆಯಲ್ಲಿ ಭಾರಿ ಬದಲಾವಣೆ: ಏನದು ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ಬಜೆಟ್‌ನಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪವನ್ನು ಬದಲಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಈವರೆಗೆ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ, ಇನ್ನು ಮುಂದೆ ಪಡಿತರ ಚೀಟಿದಾರರಿಗೆ ‘ಇಂದಿರಾ ಕಿಟ್’ ವಿತರಿಸಲು ಸರ್ಕಾರ ನಿರ್ಧರಿಸಿದೆ.

ಈ ಇಂದಿರಾ ಕಿಟ್‌ನಲ್ಲಿ ಅಕ್ಕಿಯ ಬದಲಿಗೆ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಇರಲಿದೆ. ಇದಕ್ಕಾಗಿ ಸರ್ಕಾರ 6,200 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕಳೆದ ವರ್ಷ 8,275 ಕೋಟಿ ರೂ. ನೀಡಲಾಗಿತ್ತು. ಆದರೆ ಈ ಬಾರಿ ಅದನ್ನು 7,945 ಕೋಟಿ ರೂ. ಗೆ ಸೀಮಿತಗೊಳಿಸಲಾಗಿದೆ.

ಇದನ್ನೂಓದಿ: ಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!

ಪಡಿತರ ಚೀಟಿದಾರರ ದೂರುಗಳನ್ನು ತ್ವರಿತವಾಗಿ ಆಲಿಸಲು ಎಐ (AI) ತಂತ್ರಜ್ಞಾನ ಆಧಾರಿತ ‘ಸ್ಮಾರ್ಟ್ ಅನ್ನವಾಣಿ’ ಸಹಾಯವಾಣಿಯನ್ನು ಪರಿಚಯಿಸಲಾಗುವುದು. ಇದು ವಾಯ್ಸ್ ಚಾಟ್‌ಬಾಟ್ ಸೌಲಭ್ಯವನ್ನೂ ಹೊಂದಿರಲಿದೆ. ರಾಜ್ಯದ 34 ಹೊಸ ಕಲ್ಯಾಣ ಸಂಸ್ಥೆಗಳನ್ನು ದಾಸೋಹ ಯೋಜನೆಗೆ ಸೇರಿಸಲಾಗಿದ್ದು, ಒಟ್ಟು 38,758 ಫಲಾನುಭವಿಗಳಿಗೆ ಆಹಾರ ಭದ್ರತೆ ಒದಗಿಸಲಾಗುತ್ತದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು