Breaking News

ರಾಜ್ಯದಲ್ಲಿ ಅತಿವೃಷ್ಟಿ-ಬರ ಎದುರಿಸಲು ಸರ್ಕಾರ ‘ಅಲರ್ಟ್’: ಸಚಿವರಿಗೆ ಜಿಲ್ಲಾ ಪ್ರವಾಸ ಮತ್ತು ತುರ್ತು ವರದಿ ಸಲ್ಲಿಕೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಉದ್ಭವಿಸಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ತಲುಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮ ಕೈಗೊಂಡಿದ್ದಾರೆ. ಸಂಪುಟದ ಎಲ್ಲಾ ಸಚಿವರು ತಮಗೆ ಹಂಚಿಕೆ ಮಾಡಲಾಗಿರುವ ಉಸ್ತುವಾರಿ ಜಿಲ್ಲೆಗಳಿಗೆ ತಕ್ಷಣವೇ ಪ್ರವಾಸ ಕೈಗೊಂಡು, ಪರಿಸ್ಥಿತಿಯ ವಾಸ್ತವ ವರದಿಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಚಿವರು ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿಯೊಂದು ತಾಲೂಕಿಗೆ ಖುದ್ದಾಗಿ ಭೇಟಿ ನೀಡಿ, ವಾಸ್ತವ ಸ್ಥಿತಿಯನ್ನು ಪರಿವೀಕ್ಷಣೆ ನಡೆಸಬೇಕು. ಸ್ಥಳದಲ್ಲೇ ಇದ್ದು ಸಾರ್ವಜನಿಕರ ಹಾಗೂ ರೈತರ ಅಹವಾಲುಗಳನ್ನು ಆಲಿಸಿ, ತಕ್ಷಣದ ಪರಿಹಾರ ಕ್ರಮಗಳಿಗೆ ಚಾಲನೆ ನೀಡಬೇಕು.

ಇದನ್ನೂ ಓದಿ: ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಾಲು ಸಾಲು ರಾಜೀನಾಮೆಗೆ ಮುಂದಾದ ಶಾಸಕರು

ಇಲ್ಲಿದೆ ನೋಡಿ ಲಿಸ್ಟ್​​:

ವಾಸ್ತವ ಸ್ಥಿತಿಗತಿಗಳ ಕುರಿತು ಸಮಗ್ರ ವರದಿ ತಯಾರಿಸಿ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ಕಳುಹಿಸಿಕೊಡಬೇಕು. “ಸಂಕಷ್ಟದ ಈ ಸಮಯದಲ್ಲಿ ಜನರ ಜೊತೆಗೆ ನಮ್ಮ ಸರ್ಕಾರ ನಿಲ್ಲಲಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ತುರ್ತು ಹಾಗೂ ಪರಿಹಾರ ಕ್ರಮಗಳನ್ನು ನಾವು ಖಂಡಿತ ಕೈಗೊಳ್ಳುತ್ತೇವೆ” ಎಂದು ಸಿಎಂ ಭರವಸೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *