2025ರ ಮುಖ್ಯಮಂತ್ರಿ ಪದಕ ಘೋಷಣೆ: ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ ಸೇರಿದಂತೆ 153 ಪೊಲೀಸರು ಆಯ್ಕೆ, ಮಂಗಳೂರಿನ ಎಸಿಪಿ ನಜ್ಮಾ ಫಾರೂಕಿಗೂ ಗೌರವ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿನ ಅಸಾಧಾರಣ ಸೇವೆ ಮತ್ತು ಕರ್ತವ್ಯ ನಿಷ್ಠೆಯನ್ನು ಗುರುತಿಸಿ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ಗಳನ್ನು ಘೋಷಿಸಲಾಗಿದೆ. ಈ ಬಾರಿ ಒಟ್ಟು 153 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಬಾರಿಯ ಆಯ್ಕೆ ಪಟ್ಟಿಯಲ್ಲಿ ವಿಶೇಷವಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳಿಗೆ ಮನ್ನಣೆ ಸಿಕ್ಕಿದೆ. ಎಸ್‌ಐಟಿ ಸದಸ್ಯರಾಗಿದ್ದ ಬಳ್ಳಾರಿ ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಪದಕಕ್ಕೆ ಭಾಜನರಾಗಿದ್ದಾರೆ.

Advertisement

ಒಟ್ಟು 153 ಮಂದಿಯ ಪಟ್ಟಿಯಲ್ಲಿ 6 ಐಪಿಎಸ್ ಅಧಿಕಾರಿಗಳು ಸ್ಥಾನ ಪಡೆದಿದ್ದಾರೆ. ಉಡುಪಿ ಎಸ್ಪಿ ಡಾ. ಕೆ. ಅರುಣ್, ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್, ಬೆಂಗಳೂರಿನ ಸಂಚಾರ ವಿಭಾಗದ ಡಿಸಿಪಿ ಡಾ. ಗೋಪಾಲ ಎಂ. ಬ್ಯಾಕೋಡ ಅವರು ಈ ಗೌರವಕ್ಕೆ ಆಯ್ಕೆಯಾದ ಪ್ರಮುಖ ಐಪಿಎಸ್ ಅಧಿಕಾರಿಗಳು. ಇವರಲ್ಲದೆ 12 ಡಿವೈಎಸ್‌ಪಿಗಳು ಮತ್ತು ವಿವಿಧ ಹಂತದ ಇನ್ಸ್‌ಪೆಕ್ಟರ್‌ಗಳು ಹಾಗೂ ಕಾನ್‌ಸ್ಟೇಬಲ್‌ಗಳು ಪಟ್ಟಿಯಲ್ಲಿದ್ದಾರೆ.

ಇದನ್ನೂ ಓದಿ: ಸೂರತ್–ಮಂಗಳೂರು, ಅಹಮದಾಬಾದ್–ಮಂಗಳೂರು: ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ವಿಜಯಪುರದ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿದ ತಂಡಕ್ಕೂ ಕೂಡ ಮುಖ್ಯಮಂತ್ರಿ ಪದಕ ಒಲಿದಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪದಕಗಳನ್ನು ಪ್ರದಾನ ಮಾಡಲಿದ್ದಾರೆ. ನಿಗದಿತ ಸಮವಸ್ತ್ರ ಧರಿಸಿ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಡಿಜಿಪಿ ಡಾ. ಎಂ.ಎ. ಸಲೀಂ ಅವರು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು