ದೆಹಲಿ: ಕರ್ನಾಟಕದ ರೈತ ಬಾಂಧವರ ಹಿತ ಕಾಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ರೈತಪರ ನಿರ್ಧಾರ ಕೈಗೊಂಡಿದೆ. 2026-27ರ ಮುಂಗಾರು (ಖರೀಫ್) ಋತುವಿನಲ್ಲಿ ರಾಜ್ಯದ ಪ್ರಮುಖ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಖರೀದಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅನುಮೋದನೆ ನೀಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಸರ್ಕಾರದ ಕೋರಿಕೆಗೆ ತಕ್ಷಣವೇ ಸ್ಪಂದಿಸಿರುವ ಕೇಂದ್ರ ಸರ್ಕಾರ, ಬೆಲೆ ಬೆಂಬಲ ಯೋಜನೆ (PSS) ಅಡಿಯಲ್ಲಿ ಬೃಹತ್ ಪ್ರಮಾಣದ ಕೃಷಿ ಉತ್ಪನ್ನಗಳನ್ನು ಖರೀದಿಸಲು ಗ್ರೀನ್ ಸಿಗ್ನಲ್ ನೀಡಿದೆ.
ಸೋಯಾಬೀನ್: 1,15,500 ಮೆಟ್ರಿಕ್ ಟನ್
ಹೆಸರುಕಾಳು (ಮೂಂಗ್): 38,250 ಮೆಟ್ರಿಕ್ ಟನ್
ಸೂರ್ಯಕಾಂತಿ: 13,413 ಮೆಟ್ರಿಕ್ ಟನ್
ರೈತರ ಶ್ರಮಕ್ಕೆ ಸೂಕ್ತ ಹಾಗೂ ಲಾಭದಾಯಕ ಬೆಲೆ ಒದಗಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯದ ಸಮಸ್ತ ರೈತ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಇದನ್ನೂ ಓದಿ: ಇನ್ಮುಂದೆ ಉಪ್ಪಿನ ಪ್ಯಾಕೆಟ್ ಮೇಲೂ ‘ಸಿಗರೇಟ್ ಮಾದರಿ’ ವಾರ್ನಿಂಗ್ ಲೇಬಲ್
ಈ ನಿರ್ಧಾರದಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಅಭಾವ ಎದುರಿಸುತ್ತಿದ್ದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದ್ದು, ಕೃಷಿ ಉತ್ಪನ್ನಗಳ ಮಾರಾಟದಲ್ಲಿ ಎದುರಾಗುತ್ತಿದ್ದ ಸಂಕಷ್ಟಕ್ಕೆ ಪರಿಹಾರ ಸಿಕ್ಕಂತಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

