ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತ ವೇತನದಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 1.50ರಷ್ಟು ಹೆಚ್ಚಳ ಮಾಡಲಾಗಿದ್ದು, ಈ ಕುರಿತು ಆರ್ಥಿಕ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ.
ಈ ಹಿಂದೆ ಶೇ. 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಈಗ ಶೇ. 15.75 ಕ್ಕೆ ಏರಿಕೆ ಮಾಡಲಾಗಿದೆ.2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ.
ಇದನ್ನೂ ಓದಿ:Bengaluru: ತೆರಿಗೆ ಪಾವತಿಸದ ಆಸ್ತಿ ಮಾಲೀಕರಿಗೆ ಡೆಡ್‌ಲೈನ್! ತಪ್ಪಿದರೆ ಆಸ್ತಿ ಹರಾಜು
ಈ ಆದೇಶವು ಕೇವಲ ಹಾಲಿ ನೌಕರರಿಗೆ ಮಾತ್ರವಲ್ಲದೆ, ರಾಜ್ಯ ಸರ್ಕಾರದ ನಿವೃತ್ತ ವೇತನದಾರರಿಗೂ ಅನ್ವಯವಾಗಲಿದ್ದು, ಅವರ ಮಾಸಿಕ ಆದಾಯದಲ್ಲಿ ಏರಿಕೆಯಾಗಲಿದೆ. ಬೆಲೆ ಏರಿಕೆಯ ಈ ಕಾಲದಲ್ಲಿ ನೌಕರರ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರದ ಈ ನಿರ್ಧಾರವು ನೌಕರರ ವಲಯದಲ್ಲಿ ಸಂತಸ ಮೂಡಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


