ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ (SC) ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇತ್ತೀಚೆಗೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ನಿರ್ಧಾರದಂತೆ, 400 ಬಿಂದುಗಳ ರೋಸ್ಟರ್ ಪಟ್ಟಿಯನ್ನು ಅಂತಿಮಗೊಳಿಸಿ ಬುಧವಾರ ಅಧಿಕೃತ ವಿವರ ಬಿಡುಗಡೆ ಮಾಡಿದೆ. ಈ ಮೂಲಕ ಹಲವು ದಿನಗಳಿಂದ ಬಾಕಿ ಉಳಿದಿದ್ದ ಸುಮಾರು 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ.
ಸರ್ಕಾರದ ಹೊಸ ಆದೇಶದಂತೆ ಒಟ್ಟು ಶೇ. 15ರಷ್ಟು ಪರಿಶಿಷ್ಟ ಜಾತಿ ಮೀಸಲಾತಿಯನ್ನು ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ:
ಪ್ರವರ್ಗ ‘ಎ’ (SC-A): ಶೇ. 5.25
ಪ್ರವರ್ಗ ‘ಬಿ’ (SC-B): ಶೇ. 5.25
ಪ್ರವರ್ಗ ‘ಸಿ’ (SC-C): ಶೇ. 4.5
ಇದನ್ನೂ ಓದಿ: ಇಂಧನ ಬಿಕ್ಕಟ್ಟು ನಿಯಂತ್ರಣಕ್ಕೆ ಪ್ರಧಾನಿ ಮೋದಿ ಮಾದರಿ ನಡೆ: ಸ್ವತಃ ಬೆಂಗಾವಲು ಪಡೆ ವಾಹನಗಳ ಸಂಖ್ಯೆ ಕಡಿತಗೊಳಿಸಿದ ಪಿಎಂ!
ಈ ಹಂಚಿಕೆಯ ಆಧಾರದ ಮೇಲೆ 400 ರೋಸ್ಟರ್ ಬಿಂದುಗಳನ್ನು ಗುರುತಿಸಲಾಗಿದ್ದು, ನೇಮಕಾತಿಯಲ್ಲಿ ಪ್ರತಿ ಪ್ರವರ್ಗಕ್ಕೆ ಸಿಗಬೇಕಾದ ಸರಿಯಾದ ಪಾಲನ್ನು ಈ ಪಟ್ಟಿ ಖಚಿತಪಡಿಸಲಿದೆ. ಈ ಐತಿಹಾಸಿಕ ನಿರ್ಧಾರದಿಂದಾಗಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


