ಮೇ 31 ಅಥವಾ ಜೂನ್ 1ರಂದು ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ!

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಬಹುದಿನಗಳಿಂದ ಕಾಯುತ್ತಿದ್ದ ಮಹತ್ತರ ಆಡಳಿತ ಬದಲಾವಣೆಯ ಘಟ್ಟ ಅಂತಿಮ ಹಂತಕ್ಕೆ ತಲುಪಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 31 (ಭಾನುವಾರ) ಅಥವಾ ಜೂನ್ 1 (ಸೋಮವಾರ) ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳು ದಟ್ಟವಾಗಿವೆ ಎಂದು ದೆಹಲಿ ಮತ್ತು ಬೆಂಗಳೂರಿನ ಉನ್ನತ ರಾಜಕೀಯ ಮೂಲಗಳು ವರದಿ ಮಾಡಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಈ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ.

ದೆಹಲಿಯಲ್ಲಿ ಎಐಸಿಸಿ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಸರಣಿ ಸಭೆಗಳನ್ನು ನಡೆಸಿದ್ದ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಅಧಿಕೃತವಾಗಿ ಶಾಸಕರ ನಾಯಕರಾಗಿ ಆಯ್ಕೆಯಾಗಲಿದ್ದಾರೆ. ಈ ಶಾಸಕಾಂಗ ಸಭೆಯ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆಯೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲಾಗುತ್ತದೆ. ಹೈಕಮಾಂಡ್ ನಾಯಕರ ಸಮ್ಮುಖದಲ್ಲೇ ಅತ್ಯಂತ ವೈಭವಯುತವಾಗಿ ಈ ಪ್ರಮಾಣ ವಚನ ಸಮಾರಂಭವನ್ನು ನಡೆಸಲು ಸಿದ್ಧತೆಗಳು ತೆರೆಮರೆಯಲ್ಲಿ ಸಾಗಿವೆ.

ಇದನ್ನೂ ಓದಿ: ರಾಜಕೀಯ ರಂಗಕ್ಕೆ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ಎಂಟ್ರಿ!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರಿದ ನಟಿ!

 ಮೇ 31ರಂದು ಅರಮನೆ ಮೈದಾನ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಈ ಐತಿಹಾಸಿಕ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ಒಂದು ವೇಳೆ ತಾಂತ್ರಿಕ ಪ್ರಕ್ರಿಯೆಗಳು ವಿಳಂಬವಾದರೆ ಜೂನ್ 1ರ ಸೋಮವಾರದ ಶುಭ ಮುಹೂರ್ತದಲ್ಲಿ ಡಿಕೆಶಿ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರೊಂದಿಗೆ ಮೊದಲ ಹಂತದಲ್ಲಿ ಯಾರಿಗೆಲ್ಲಾ ಸಚಿವ ಸ್ಥಾನ ಒಲಿಯಲಿದೆ ಎಂಬ ಕುರಿತೂ ಸದ್ಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದು, ಹೈಕಮಾಂಡ್ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು