ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಲಪಾಡಿ ಯುವಕ ಸಾವು: ರಜೆ ಮೇಲೆ ಬಂದಿದ್ದಾಗ ಸಂಭವಿಸಿದ ದುರಂತ

ಮಂಗಳೂರು: ಬೆಂಗಳೂರಿನ ಬಹುಮಹಡಿ ಕಟ್ಟಡವೊಂದರಲ್ಲಿ ಎಸಿ (AC) ಅಳವಡಿಸುವ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ತಲಪಾಡಿಯ ಯುವಕ ಹರ್ಷಿತ್ ಪೂಜಾರಿ (32) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತ ಹರ್ಷಿತ್ ಕಳೆದ ಮೂರು ವರ್ಷಗಳಿಂದ ವಿದೇಶದಲ್ಲಿ ಹಡಗು ಉದ್ಯಮದಲ್ಲಿ (Merchant Navy/Shipping) ಕೆಲಸ ಮಾಡುತ್ತಿದ್ದರು.

ಪ್ರತಿ ಮೂರು ತಿಂಗಳಿಗೊಮ್ಮೆ ರಜೆ ಮೇಲೆ ಊರಿಗೆ ಬರುತ್ತಿದ್ದ ಅವರು, ಬಿಡುವಿನ ವೇಳೆಯಲ್ಲಿ ತಮ್ಮ ಹಳೆಯ ವೃತ್ತಿಯಾದ ಎಸಿ ಮೆಕ್ಯಾನಿಕ್ ಕೆಲಸವನ್ನೂ ಮಾಡುತ್ತಿದ್ದರು. ಇತ್ತೀಚೆಗೆ ಸಂಬಂಧಿಕರೊಬ್ಬರಿಗೆ ಈ ವೃತ್ತಿಯ ಬಗ್ಗೆ ತರಬೇತಿ ನೀಡಲು ಬೆಂಗಳೂರಿಗೆ ತೆರಳಿದ್ದರು.ಬೆಂಗಳೂರಿನಲ್ಲಿ ಎಸಿ ಯುನಿಟ್ ಅಳವಡಿಸುತ್ತಿದ್ದಾಗ ಸಮತೋಲನ ತಪ್ಪಿ ಕಟ್ಟಡದಿಂದ ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಇದನ್ನೂ ಓದಿ: ವಿಧಾನಸೌಧದ ಮುಂದೆ ಹೈಡ್ರಾಮಾ: ಮಹಿಳಾ ದಿನದಂದೇ ಯುವತಿಯರ ಬೀದಿ ಕಾಳಗ; ವಿಡಿಯೋ ವೈರಲ್!

ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್ 7 ರಂದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿತ್ತು. ಆದರೆ, ಮಂಗಳೂರಿಗೆ ತಲುಪುವ ಮೊದಲೇ ಹರ್ಷಿತ್ ಕೊನೆಯುಸಿರೆಳೆದಿದ್ದಾರೆ.ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿಯ ಪುತ್ರನಾಗಿರುವ ಹರ್ಷಿತ್, ಪತ್ನಿ ಮತ್ತು ಎರಡು ವರ್ಷದ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ. ಸೋಮವಾರ ಅವರ ಅಂತ್ಯಕ್ರಿಯೆ ನೆರವೇರಿದ್ದು, ತಲಪಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು