ಉತ್ತರಕನ್ನಡ: ರಾಜ್ಯದಲ್ಲಿ ಬಾಕಿ ಉಳಿದಿರುವ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಜೂನ್ ತಿಂಗಳ ಅಂತ್ಯದೊಳಗೆ ಏಕಕಾಲದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಜಿಲ್ಲೆಯ ಗೋಕರ್ಣದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಜೂನ್ ವೇಳೆಗೆ ಮತದಾನ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮೆಸ್ಕಾಂ ಪ್ರಕಟಣೆ: ಫೆ.24 ರಂದು ಈ ಪ್ರದೇಶಗಳಲ್ಲಿ ಪವರ್ ಕಟ್
2023ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸದ ಹಿನ್ನೆಲೆಯಲ್ಲಿ ಸರ್ಕಾರ ಟೀಕೆಗೆ ಗುರಿಯಾಗಿತ್ತು. ಸುಮಾರು 195 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಪೂರ್ಣಗೊಂಡಿದೆ. ಈ ಬಾರಿ ಒಟ್ಟಾರೆ 5,952 ಗ್ರಾಮ ಪಂಚಾಯಿತಿಗಳು, 239 ತಾಲೂಕು ಪಂಚಾಯಿತಿಗಳು, 31 ಜಿಲ್ಲಾ ಪಂಚಾಯಿತಿಗಳು ಮತ್ತು ಐದು ನಗರ ನಿಗಮಗಳಿಗೆ ಚುನಾವಣೆ ನಡೆಯಲಿದೆ.
ಗೋಕರ್ಣವನ್ನು ಟೌನ್ ಮ್ಯುನಿಸಿಪಲ್ ಕೌನ್ಸಿಲ್ ಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಸಂಬಂಧವೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು. ಒಟ್ಟಿನಲ್ಲಿ, ರಾಜ್ಯದ ಸ್ಥಳೀಯ ಆಡಳಿತ ವ್ಯವಸ್ಥೆಗೆ ಚೈತನ್ಯ ತುಂಬುವ ಮಹತ್ವದ ಚುನಾವಣಾ ಘಟ್ಟ ಎದುರಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

