ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ: ವ್ಯವಸ್ಥಿತ ಹಾಗೂ ಪಾರದರ್ಶಕತೆಗೆ ಒತ್ತು, 5 ಉಪಸಮಿತಿಗಳ ರಚನೆ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳ ಆಯ್ಕೆಗಾಗಿ ರಚಿಸಲಾಗಿರುವ ಸಲಹಾ ಸಮಿತಿಯ ಸದಸ್ಯರ ಸಭೆಯು ಇತ್ತೀಚೆಗೆ ನಡೆದಿದ್ದು, ಪ್ರಶಸ್ತಿ ವಿಜೇತರ ಆಯ್ಕೆ ಪ್ರಕ್ರಿಯೆಯ ಕುರಿತು ಸವಿವರವಾಗಿ ಚರ್ಚಿಸಲಾಗಿದೆ. ರಾಜ್ಯದ ಭಾಷೆ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿರುವ ಅರ್ಹ ಸಾಧಕರನ್ನು ಗುರುತಿಸಿ ಗೌರವಿಸುವುದು ನಮ್ಮ ಮುಖ್ಯ ಆಶಯವಾಗಿದೆ ಎಂದು ತಿಳಿಸಲಾಗಿದೆ.

ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಒಟ್ಟು ಐದು ಉಪಸಮಿತಿಗಳನ್ನು ರಚಿಸಲಾಗಿದೆ.  ಪ್ರತಿಯೊಂದು ಉಪಸಮಿತಿಗೆ ಅರ್ಹ ಸಾಧಕರ ಹೆಸರುಗಳನ್ನು 1:2 ರ ಅನುಪಾತದಲ್ಲಿ ಶಿಫಾರಸು ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.