Breaking News

ಮಹಿಳೆಯರ ‘ಮೆನೋಪಾಸ್’ ಸಮಸ್ಯೆಗೆ ರಾಜ್ಯ ಸರ್ಕಾರದ ಮಾಸ್ಟರ್ ಪ್ಲಾನ್: ‘ಋತುತಾರೆ’ ಯೋಜನೆ ಘೋಷಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್

ಬೆಂಗಳೂರು: ಮಹಿಳೆಯರು ತಮ್ಮ ಜೀವನದ ಪ್ರಮುಖ ಘಟ್ಟದಲ್ಲಿ ಎದುರಿಸುವ ಮಾನಸಿಕ ಹಾಗೂ ದೈಹಿಕ ಒತ್ತಡಗಳಾದ ‘ಮೆನೋಪಾಸ್’ (Menopause) ಸಮಸ್ಯೆಗೆ ಸೂಕ್ತ ಪರಿಹಾರ ಹಾಗೂ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ಋತುತಾರೆ’ (Rithutare) ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ಕುರಿತು ಸ್ವತಃ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಮಹಿಳೆಯರನ್ನು ತೀವ್ರವಾಗಿ ಕಾಡುತ್ತಿರುವ ಮೆನೋಪಾಸ್ ಕುರಿತು ಸೂಕ್ತ ಅರಿವು ಮತ್ತು ವೈದ್ಯಕೀಯ ನೆರವು ನೀಡುವಂತೆ ಸಚಿವರಲ್ಲಿ ನಟಿ ರಮ್ಯಾ ಅವರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್, ನಟಿ ರಮ್ಯಾ ಹಾಗೂ ಮಹಿಳಾ ರೋಗ ತಜ್ಞರೊಂದಿಗೆ ಸುದೀರ್ಘ ಸಂವಾದ ಸಭೆ ನಡೆಯಿತು. ಸಭೆಯಲ್ಲಿ ಸ್ವೀಕರಿಸಲಾದ ಮಹತ್ವದ ಸಲಹೆ-ಸೂಚನೆಗಳ ಆಧಾರದ ಮೇಲೆ ಸರ್ಕಾರ ಈ ಕ್ರಾಂತಿಕಾರಿ ನಿರ್ಧಾರ ತಳೆದಿದೆ.

ಮೆನೋಪಾಸ್ ಸಮಸ್ಯೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಸಿದ್ಧ ಮಹಿಳಾ ರೋಗ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ತಜ್ಞರ ಸಮಿತಿಯನ್ನು ರಚಿಸಲಾಗಿದೆ.ಯೋಜನೆಯ ಪ್ರಚಾರ ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರನ್ನು ‘ಋತುತಾರೆ’ ಕಾರ್ಯಕ್ರಮದ ಅಧಿಕೃತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ.

ಇದನ್ನೂ ಓದಿ: Health Tips: ಈ 5 ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಿದರೆ ಅಪಾಯ

ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಮಹಿಳೆಯರ ಆರೋಗ್ಯ ಸಂಬಂಧಿತ ದತ್ತಾಂಶವನ್ನು (Data) ಸಂಗ್ರಹಿಸಲಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *