ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ 2026ರ ಸಾಲಿನ ವಾರ್ಷಿಕ ಪರೀಕ್ಷೆಗಳ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 18 ರಿಂದ ಆರಂಭವಾಗಲಿದೆ.
ಪರೀಕ್ಷಾ ಸಮಯ ಮತ್ತು ವಿವರ:

ದ್ವಿತೀಯ ಪಿಯುಸಿ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ.
ಎಸ್‌ಎಸ್‌ಎಲ್‌ಸಿ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:15 ಗಂಟೆಯವರೆಗೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದ ಕೆಎಸ್ಆರ್‌ಟಿಸಿ
ದ್ವಿತೀಯ ಪಿಯುಸಿ ವೇಳಾಪಟ್ಟಿ (ಪ್ರಮುಖ ದಿನಾಂಕಗಳು):
ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಸಂಗೀತ, ಆಟೋಮೊಬೈಲ್ ಇತ್ಯಾದಿ.
ಪರೀಕ್ಷೆ-1 ಮುಗಿದ ಬಳಿಕ, ಮೇ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಆರಂಭವಾಗಲಿದ್ದು, ಮೇ 23ಕ್ಕೆ ಮುಕ್ತಾಯವಾಗಲಿದೆ. ಪಿಯುಸಿ ಫಲಿತಾಂಶವು ಏಪ್ರಿಲ್ 7, 2026 ರಂದು ಪ್ರಕಟವಾಗುವ ಸಾಧ್ಯತೆಯಿದೆ ಎಂದು ಸಚಿವರು ಸುಳಿವು ನೀಡಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

