SSLC ಫಲಿತಾಂಶ 2026: ಜಿಲ್ಲಾವಾರು ರ್ಯಾಂಕಿಂಗ್ ಪಟ್ಟಿ ಬಿಡುಗಡೆ; ರಾಜ್ಯಕ್ಕೆ ದಕ್ಷಿಣ ಕನ್ನಡ ನಂ.1, ಉಡುಪಿಗೆ 2ನೇ ಸ್ಥಾನ!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಜಿಲ್ಲಾವಾರು ಫಲಿತಾಂಶದ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಶೇ. 98.40ರಷ್ಟು ಫಲಿತಾಂಶದೊಂದಿಗೆ ರಾಜ್ಯದಲ್ಲೇ ಮೊದಲ ಸ್ಥಾನವನ್ನು ಅಲಂಕರಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಮೊದಲ ಮೂರು ಸ್ಥಾನಗಳನ್ನು ಪಡೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿವೆ.ಹಾಸನ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳು ಮೊದಲ 10 ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಿವೆ.

ಇದನ್ನೂ ಓದಿ: ಕರ್ನಾಟಕ SSLC ಫಲಿತಾಂಶ 2026: ಶೇ. 94.1ರಷ್ಟು ದಾಖಲೆ ಪ್ರಮಾಣದ ತೇರ್ಗಡೆ; ಏಳು ವಿದ್ಯಾರ್ಥಿಗಳಿಗೆ 625ಕ್ಕೆ 625

ಬೆಂಗಳೂರು ಗ್ರಾಮಾಂತರ ಜಿಲ್ಲೆಯು 11ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ಉತ್ತರ ಜಿಲ್ಲೆಯು 15ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು