ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಗಮನಕ್ಕೆ: ಮಾ. 30ರ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ!

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಮಾರ್ಚ್ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮುಂದೂಡಿದೆ.

ಮಾರ್ಚ್ 30ರಂದು ಮಹಾವೀರ ಜಯಂತಿ ಇರುವುದರಿಂದ ಸರ್ಕಾರಿ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಬೇಸಿಗೆ ರಜೆಯಲ್ಲಿ ರಾಮಾಯಣ ಓದಿ, 50 ಸಾವಿರ ರೂ. ಗೆಲ್ಲಿ! ಶೃಂಗೇರಿ ಮಠದ ‘ಬಾಲ ಭಾರತಿ’ ವತಿಯಿಂದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

ಮುಂದೂಡಲ್ಪಟ್ಟ ಹಿಂದಿ ಪರೀಕ್ಷೆಯು ಈಗ ಮಾರ್ಚ್ 31, 2026ರಂದು ನಡೆಯಲಿದೆ ಎಂದು ಮಂಡಳಿಯು ಅಧಿಕೃತ ಸುತ್ತೋಲೆ ಹೊರಡಿಸಿದೆ.ಉಳಿದ ಪರೀಕ್ಷೆಗಳು ಮೊದಲೇ ನಿಗದಿಯಾದ ವೇಳಾಪಟ್ಟಿಯಂತೆ ಯಾವುದೇ ಬದಲಾವಣೆಯಿಲ್ಲದೆ ನಡೆಯಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು