ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದೆ. 2026ರ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23, ಗುರುವಾರ) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟವಾಗಲಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಸುದೀರ್ಘ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯವನ್ನು ಖಚಿತಪಡಿಸಿದರು. “ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಫಲಿತಾಂಶ ಲಭ್ಯವಾಗಲಿದೆ” ಎಂದು ಅವರು ತಿಳಿಸಿದರು.
ಇದನ್ನೂ ಓದಿ: SSLC ಫಲಿತಾಂಶ 2026: ಜಿಲ್ಲಾವಾರು ರ್ಯಾಂಕಿಂಗ್ ಪಟ್ಟಿ ಬಿಡುಗಡೆ; ರಾಜ್ಯಕ್ಕೆ ದಕ್ಷಿಣ ಕನ್ನಡ ನಂ.1, ಉಡುಪಿಗೆ 2ನೇ ಸ್ಥಾನ!
ಹಿಂದಿ ವಿಷಯದ ಬಗ್ಗೆ ಕೋರ್ಟ್ ಆದೇಶ ಪಾಲನೆ:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗ್ರೇಡಿಂಗ್ ಮತ್ತು ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇತ್ತೀಚೆಗೆ ನೀಡಿದ್ದ ಆದೇಶದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಕೋರ್ಟ್ ಆದೇಶವನ್ನು ಗೌರವಿಸಿ, ಅದರಂತೆಯೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇದರಿಂದಾಗಿ ಕಾನೂನು ಗೊಂದಲಗಳಿಗೂ ತೆರೆಬಿದ್ದಂತಾಗಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು:
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


