ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದ್ದು, ಶಿಕ್ಷಣ ಇಲಾಖೆಯು ಇಂದು 10ನೇ ತರಗತಿಯ ಫಲಿತಾಂಶವನ್ನು ಘೋಷಿಸಿದೆ. ಮಧ್ಯಾಹ್ನ 12 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವರು ಮತ್ತು ಮಂಡಳಿಯ ಅಧಿಕಾರಿಗಳು ಫಲಿತಾಂಶದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.ಈ ವರ್ಷದ ಫಲಿತಾಂಶವು ಅತ್ಯುತ್ತಮವಾಗಿದ್ದು, ಶೇ. 85ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಳೆದ ಬಾರಿಗಿಂತ (ಶೇ. 62.34) ಗಣನೀಯ ಪ್ರಗತಿ ಸಾಧಿಸಿದ್ದಾರೆ.ಒಟ್ಟು 8.6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ನಿಮ್ಮ ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು:
ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಿ.

ಮುಖಪುಟದಲ್ಲಿ “SSLC Examination-1 Result 2026” ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
‘Submit’ ಬಟನ್ ಕ್ಲಿಕ್ ಮಾಡಿದರೆ ನಿಮ್ಮ ರಿಸಲ್ಟ್ ಪರದೆಯ ಮೇಲೆ ಮೂಡುತ್ತದೆ.

