ಅಮೆರಿಕದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನಾಪತ್ತೆ

ಕ್ಯಾಲಿಫೋರ್ನಿಯಾ: ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಕಳೆದ ಎರಡು ದಿನಗಳಿಂದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದಾರೆ. ವಿದ್ಯಾರ್ಥಿಯ ಫೋನ್ ಸ್ವಿಚ್ ಆಫ್ ಆಗಿದ್ದು, ಯಾವುದೇ ಸಂಪರ್ಕ ಸಿಗದ ಕಾರಣ ಬೆಂಗಳೂರಿನಲ್ಲಿರುವ ಅವರ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ನಾಪತ್ತೆಯಾದ ವಿದ್ಯಾರ್ಥಿ ಬೆಂಗಳೂರು ಮೂಲದವನಾಗಿದ್ದು, ಕ್ಯಾಲಿಫೋರ್ನಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಕಳೆದ ಎರಡು ದಿನಗಳಿಂದ ಆತ ತನ್ನ ಪೋಷಕರಿಗೆ ಕರೆ ಮಾಡಿಲ್ಲ ಮತ್ತು ಪೋಷಕರು ಮಾಡಿದ ಕರೆಗಳಿಗೂ ಸಿಗುತ್ತಿಲ್ಲ. ಆತನ ಗೆಳೆಯರನ್ನು ವಿಚಾರಿಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ವಿದ್ಯಾರ್ಥಿಯ ನಾಪತ್ತೆಯಿಂದ ಕಂಗಾಲಾಗಿರುವ ಕುಟುಂಬಸ್ಥರು, ಆತನನ್ನು ಪತ್ತೆಹಚ್ಚಲು ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಇಲಾಖೆಯ ಮೊರೆ ಹೋಗಿದ್ದಾರೆ. ಕೇಂದ್ರ ಸಚಿವರು ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಅಮೆರಿಕದ ಸ್ಥಳೀಯ ಪೊಲೀಸರೊಂದಿಗೆ ಮಾತನಾಡಿ ತಮ್ಮ ಮಗನನ್ನು ಹುಡುಕಿಕೊಡಬೇಕೆಂದು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್​​​ಪಿ ಪಕ್ಷ ಭರ್ಜರಿ ಜಯ: ಪ್ರಧಾನಿ ಮೋದಿ ಶುಭಾಶಯ

ಅಮೆರಿಕದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಸರಣಿ ದಾಳಿಗಳು ಮತ್ತು ನಾಪತ್ತೆ ಪ್ರಕರಣಗಳು ಈ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ. ಕ್ಯಾಲಿಫೋರ್ನಿಯಾ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು