ಶೀಘ್ರದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ, ಮಲೆನಾಡು ಟೂರಿಸಂ ಅಭಿವೃದ್ಧಿಗೆ ಪ್ರತ್ಯೇಕ ನೀತಿ ಫಿಕ್ಸ್

ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರ್ಕಾರ ಭರ್ಜರಿ ತಂತ್ರ ರೂಪಿಸಿದೆ. ಬೆಂಗಳೂರಿನ ವಿಧಾನಸೌಧದಲ್ಲಿಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರ ಮಹತ್ವದ ಸಭೆಯಲ್ಲಿ ಈ ಕುರಿತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ (Cabinet Meeting) ಸಭೆ ನಡೆಸಲು ಚಿಂತನೆ ನಡೆದಿದ್ದು, ಈ ವೇಳೆ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ‘ಪ್ರತ್ಯೇಕ ನೀತಿ’ಗೆ (Exclusive Tourism Policy) ಒಪ್ಪಿಗೆ ಸಿಗುವ ಸಾಧ್ಯತೆ ಇದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ‘ಕರಾವಳಿ ನೀತಿ’:

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕರಾವಳಿ ಭಾಗದ ಪ್ರವಾಸೋದ್ಯಮ ಮತ್ತು ವ್ಯವಹಾರವನ್ನು ವೃದ್ಧಿಸಲು ವಿಶೇಷ ನೀತಿಯನ್ನು ರೂಪಿಸಲು ಸರ್ಕಾರ ಮುಂದಾಗಿದೆ. ಗೋವಾ ರಾಜ್ಯದಲ್ಲಿ ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳಲ್ಲಿ ಸಡಿಲಿಕೆ (Relaxation) ಇರುವ ಮಾದರಿಯಲ್ಲೇ ಕರ್ನಾಟಕದಲ್ಲೂ ನಿಯಮಗಳನ್ನು ಸರಳಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಸದ್ಯ ರಾಜ್ಯದಲ್ಲಿ ನಿಯಮಗಳು ಕಠಿಣವಾಗಿರುವುದರಿಂದ, ಇದರಲ್ಲಿ ಸಡಿಲಿಕೆ ತರಲು ಕೇಂದ್ರ ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಭೇಟಿ ನೀಡಿ ಮನವಿ ಸಲ್ಲಿಸಲು ತೀರ್ಮಾನಿಸಿದೆ. ಇದರೊಂದಿಗೆ ಕರಾವಳಿ ಭಾಗದಲ್ಲಿ ಸಿನಿಮಾ ಶೂಟಿಂಗ್‌ಗಳನ್ನು (Film Shooting) ಪ್ರೋತ್ಸಾಹಿಸಲು ವ್ಯಾಪಕ ಪ್ರಚಾರ ಕೈಗೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರ್ಜರಿ!: ಯೋಜನೆ ದುರುಪಯೋಗ ಪಡಿಸಿಕೊಳ್ಳುವ ಅನರ್ಹರಿಗೆ ಬಿಗ್ ಶಾಕ್; ಅರ್ಹರಿಗೆ ಮಾತ್ರ ಸಿಗಲಿದೆ ಸೌಲಭ್ಯ

ವಿಶ್ವದರ್ಜೆಯ ಪ್ರವಾಸಿ ತಾಣವಾಗಿ ಕರ್ನಾಟಕದ ಉದಯ:

ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರಮುಖ ಕರಾವಳಿ ಪ್ರವಾಸಿ ತಾಣವಾಗಿ ರೂಪಿಸುವುದು ನಮ್ಮ ಉದ್ದೇಶವಾಗಿದೆ. ಇದಕ್ಕಾಗಿ ವಿಶ್ವದರ್ಜೆಯ ಸುಸ್ಥಿರ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನೈಸರ್ಗಿಕ ಸೌಂದರ್ಯವನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಪ್ರವಾಸೋದ್ಯಮವನ್ನು ಮತ್ತಷ್ಟು ಸಮೃದ್ಧಗೊಳಿಸುವುದೇ ನಮ್ಮ ಮುಖ್ಯ ಗುರಿ” ಎಂದು ಭರವಸೆ ನೀಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು