ಕರ್ನಾಟಕದಲ್ಲಿ ಹೀಟ್ ವೇವ್ ಜೊತೆಗೆ ಮಳೆ ಅಲರ್ಟ್: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

karnataka-weather-heatwave-rain-alert-march-23-to-28-coastal-interior-districts-forecast-kannada

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ನಡುವೆಯೇ ಹವಾಮಾನದಲ್ಲಿ ಅಚ್ಚರಿ ತಿರುವು ಕಂಡುಬರುತ್ತಿದ್ದು, ಉಷ್ಣಅಲೆ ಮತ್ತು ಮಳೆಯ ಸಂಯೋಜಿತ ಪರಿಣಾಮ ಎದುರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ಆಂಧ್ರಪ್ರದೇಶ ಕರಾವಳಿ ಭಾಗದ ಸಮೀಪ ಹಾಗೂ ಉತ್ತರ ಭಾರತದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ರಾಜ್ಯದಲ್ಲಿ ಮಾರ್ಚ್ 23ರಿಂದ 28ರವರೆಗೆ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮಾರ್ಚ್ 23 ಮತ್ತು 24ರಂದು ಉಷ್ಣಅಲೆ (Heat Wave) ಪರಿಣಾಮ ಕಂಡುಬರುವ ಸಾಧ್ಯತೆ ಇದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದಾದ ಬಳಿಕ ಮಾರ್ಚ್ 28ರವರೆಗೆ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40–50 ಕಿ.ಮೀ. ಇರಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: ಬೀಚ್ ರೆಸಾರ್ಟ್‌ಗೆ ಅಡ್ಡಿ ಆರೋಪ; ಶಾಸಕ ಯಶ್‌ಪಾಲ್‌ ವಿರುದ್ಧ ರಘುಪತಿ ಭಟ್‌ ಆಕ್ರೋಶ

ಇನ್ನು ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೋಲಾರ, ರಾಯಚೂರು, ಬಳ್ಳಾರಿ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ರಾಮನಗರ, ಮಂಡ್ಯ, ಕೊಪ್ಪಳ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಬಹುದು. ಉಳಿದ ಭಾಗಗಳಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.

ಬೆಂಗಳೂರು ನಗರದಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಗರಿಷ್ಠ ತಾಪಮಾನ 32 ಡಿಗ್ರಿ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು