ಕರ್ನಾಟಕದ ದಕ್ಷಿಣ ಒಳನಾಡಿಗೆ ‘ಯೆಲ್ಲೋ ಅಲರ್ಟ್’: ಮೇ 19 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ!

ಮಂಗಳೂರು: ರಾಜ್ಯದಲ್ಲಿ ತೀವ್ರವಾಗಿದ್ದ ಬಿಸಿಲಿನ ಬೇಗೆಯ ನಡುವೆಯೇ ಸಾರ್ವಜನಿಕರಿಗೆ ನಿರಾಳ ಸುದ್ದಿ ಸಿಕ್ಕಿದೆ. ವರುಣನ ಆರ್ಭಟ ಆರಂಭವಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಲಾಗಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ನಾಲ್ಕು ದಿನಗಳ ಅವಧಿಯಲ್ಲಿ ಹಳೆಯ ಮೈಸೂರು ಭಾಗ ಸೇರಿದಂತೆ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಇದನ್ನೂ ಓದಿ: ಹಾಸನ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 36 ಪ್ರಯಾಣಿಕರು!

ಧಾರಾಕಾರ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮಳೆಯ ಜೊತೆಗೆ ಬಿರುಗಾಳಿ ಮತ್ತು ಸಿಡಿಲಿನ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಕೋರಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು