ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜಿದ್ದಿಗೆ ಬಿದ್ದಂತೆ ಹೆಚ್ಚಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ತಕ್ಷಣವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿಗೆ ಮುನ್ನೆಚ್ಚರಿಕೆ!:
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ತೀರ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಬಿರುಗಾಳಿಯ ವೇಗ ಹೆಚ್ಚಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ನದಿ ತೀರದ ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.
ಇದನ್ನೂ ಓದಿ:ಮಳೆಗಾಲದಲ್ಲಿ ಟ್ರಕ್ಕಿಂಗ್ ಹೋಗ ಬಯಸುವವರಿಗೆ ಗುಡ್ನ್ಯೂಸ್, ಜೂನ್ 1 ರಿಂದ ವಿವಿಧ ಫಾಲ್ಸ್ಗಳು ರೀ ಓಪನ್
ಒಳನಾಡಿನಲ್ಲೂ ಹೆಚ್ಚಾದ ವರುಣನ ಕ್ರೇಜ್:
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಂಜೆಯಾಗುತ್ತಿದ್ದಂತೆ ಗುಡುಗು-ಮಿಂಚಿನ ಆರ್ಭಟ ಶುರುವಾಗಲಿದ್ದು, ದಿಢೀರ್ ಪ್ರವಾಹದ ಪರಿಸ್ಥಿತಿ (Flash Floods) ಹಾಗೂ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಮಳೆಯ ಸಮಯದಲ್ಲಿ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು ಮತ್ತು ವಿದ್ಯುತ್ ಕಂಬಗಳು ಹಾಗೂ ಮರಗಳ ಕೆಳಗೆ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


