ರಾಜ್ಯಾದ್ಯಂತ ವರುಣಾರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ತೀವ್ರ ಗಾಳಿ-ಮಳೆಯ ಎಚ್ಚರಿಕೆ

karnataka-weather-heatwave-rain-alert-march-23-to-28-coastal-interior-districts-forecast-kannada

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಜುಲೈ 5ರ ವರೆಗೆ ‘ಆರೆಂಜ್​​ ಅಲರ್ಟ್​​’ ಘೋಷಿಸಲಾಗಿದೆ. ಇದೇ ವೇಳೆ ಉತ್ತರ ಒಳನಾಡು ಭಾಗದ ಹಲವೆಡೆ ಜುಲೈ 7ರ ವರೆಗೆ ವರ್ಷಧಾರೆ ಮುಂದುವರಿಯುವ ನಿರೀಕ್ಷೆಯಿದೆ.

ಗಂಟೆಗೆ 30-40 ಕಿ.ಮೀ ವೇಗದ ಗಾಳಿ:

Advertisement

ಮಳೆಯ ಜೊತೆಗೆ ರಾಜ್ಯದ ಹಲವೆಡೆ ತೀವ್ರ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋ ಮೀಟರ್​​ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆ: ಜಾತಿ ವಿವರ ನೀಡುವುದು ಕಡ್ಡಾಯವಲ್ಲ; ಸಾರ್ವಜನಿಕರ ತೀವ್ರ ವಿರೋಧದ ಬೆನ್ನಲ್ಲೇ ಬೆಸ್ಕಾಂ ಸ್ಪಷ್ಟನೆ

ಯಾವ ಯಾವ ಜಿಲ್ಲೆಗಳಲ್ಲಿ ಮಳೆ?

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಬಳ್ಳಾರಿಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ. ಉತ್ತರ ಒಳನಾಡಿನ ಹಲವು ಪ್ರದೇಶಗಳಿಗೂ ಗಾಳಿ-ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *