ಬೆಂಗಳೂರು: ನಗರದಲ್ಲಿ ಸಾಧಾರಣ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 22°C ಆಸುಪಾಸಿನಲ್ಲಿರಲಿದೆ. ಮೈಸೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಖೆಯ ಪ್ರಮಾಣ ಹೆಚ್ಚಿರಲಿದ್ದು, ಗರಿಷ್ಠ ತಾಪಮಾನ 35°C ದಾಟುವ ಸಾಧ್ಯತೆಯಿದೆ. ಕರಾವಳಿಯ ಕೆಲವು ಒಳಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳು ಇದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಹಡಗು ನಿರ್ಮಾಣ ಉದ್ಯಮಕ್ಕೆ ಮತ್ತೆ ಮರುಜೀವ; ಕರಾವಳಿಯ ಆತ್ಮವಿಶ್ವಾಸದ ಪುನಶ್ಚೇತನ ಎಂದ ಸಂಸದ ಬ್ರಿಜೇಶ್ ಚೌಟ
ರಾಜ್ಯದ ಮಲೆನಾಡು ಭಾಗಗಳಾದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರವಾಗಿ ಮೈಯೊಡ್ಡುವುದನ್ನು ತಪ್ಪಿಸಿ. ನಿರ್ಜಲೀಕರಣ ತಡೆಯಲು ಹೆಚ್ಚು ನೀರು, ಎಳನೀರು ಅಥವಾ ಮಜ್ಜಿಗೆ ಸೇವಿಸಿ ಎಂದು ತಜ್ಞರು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

